Breaking News

ಮಾಂಜಾ ದಾರ ಸಿಲುಕಿ ಬೈಕ್‌ ಸವಾರ ಸಾವು – ಕಠಿಣ ಕ್ರಮಕ್ಕೆ ಮುಂದಾದ ಪಾಲಿಕೆ

Spread the love

ಬೆಳಗಾವಿ: ಗಾಳಿಪಟದ ಮಾಂಜಾ ದಾರ  ಸಿಲುಕಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮಹಾಂತೇಶ್ ನಗರದ ನಿವಾಸಿ ದ್ರುವ ಸಂತೋಷ ಕರ್ಜಗಿ (19) ಮೃತ ದುರ್ದೈವಿ. ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮೃತ ದ್ರುವ ಮರಣೋತ್ತರ ಪರೀಕ್ಷೆ ನಡೆದಿದೆ. ಇದ್ದ ಒಬ್ಬ ಮಗನನ್ನೂ ಕಳೆದುಕೊಂಡ ಪೋಷಕರ ಆಕ್ರಂದನ ಶವಾಗಾರದ ಬಳಿ ಮುಗಿಲುಮುಟ್ಟಿತ್ತು.

ಮಾಂಜಾ ದಾರವನ್ನು ಬ್ಯಾನ್ ಮಾಡಲಾಗಿದ್ದರೂ ಪೊಲೀಸರು, ಪಾಲಿಕೆ ಅಧಿಕಾರಿಗಳು ಯಾವ ಕ್ರಮವನ್ನು ಕೈಗೊಂಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿಯೇ 3 ದಿನದ ಹಿಂದೆ ಮಾಂಜಾ ದಾರ ಸಿಕ್ಕಿತ್ತು. ಆದಾಗ್ಯೂ ನಾನು ಬದುಕುಳಿದಿದ್ದೇನೆ ಅಂತ ಸಚಿನ್ ಎಂಬಾತ ಹೇಳಿದ್ದಾರೆ.

ಬೆಳಗಾವಿ ಮೇಯರ್ ಪ್ರೀತಿ ಕಾಮಕರ್ ಮಾತನಾಡಿ, ಮಾಂಜಾ ದಾರ ಮಾರಾಟ ಮಾಡಿದರೆ ಕೂಡಲೇ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಆಯುಕ್ತರಿಗೆ ಅಂಗಡಿಗಳ ತಪಾಸಣೆ ನಡೆಸುವಂತೆ ಸೂಚನೆ ಕೊಡುತ್ತೇವೆ. ಮಹಾನಗರ ಪಾಲಿಕೆಯಿಂದಲೂ  ಬ್ಯಾನ್ ಮಾಡಲು ಸಭೆ ಮಾಡುತ್ತೇವೆ. ಕೂಡಲೇ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ