ಚಂಡೀಗಢ: ಪಂಜಾಬ್ನ ತರನ್ತಾರನ್ ಜಿಲ್ಲೆಯ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆಗೆ ಯತ್ನಿಸಿದ ಇಬ್ಬರು ನುಸುಳುಕೋರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಗಡಿ ಸಮೀಪದ ರಾಜೋಕೆ ಗ್ರಾಮದ ಬಳಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಲು ಇಬ್ಬರು ನುಸುಳುಕೋರರು ಯತ್ನಿಸಿದ್ದರು. ಈ ವೇಳೆ ಬಿಎಸ್ಎಫ್ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಶುಕ್ರವಾರ ಮುಂಜಾನೆ ರಾಜೋಕೆ ಪ್ರದೇಶದ ಗಡಿ ಭಾಗದಲ್ಲಿ ಅನುಮಾನಾಸ್ಪದವಾಗಿ ಮೂವರು ಓಡಾಡುತ್ತಿದ್ದರು. ಇದನ್ನು ಗಮನಿಸಿದ BSF ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. ಆದರೆ ಅವರು ಹಿಂದಕ್ಕೆ ತೆರಳದೆ ಭಾರತೀಯ ಪ್ರದೇಶದತ್ತಲೇ ಬಂದಿದ್ದಾರೆ. ಈ ವೇಳೆ BSF ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬ ಒಳನುಸುಳುಕೋರ ಪಾಕಿಸ್ತಾನ ಭಾಗಕ್ಕೆ ಹಿಂದಿರುಗಿರುವ ಸಾಧ್ಯತೆ ಇದೆ.
ಘಟನೆಯ ಬಳಿಕ ಭಾರತ-ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಮೃತರ ಗುರುತು ಹಾಗೂ ಅವರಿಂದ ಯಾವ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ ಎಂಬ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
Laxmi News 24×7