Breaking News

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಿದ್ದರಾಮಯ್ಯ – ಕೆ.ವೆಂಕಟೇಶ್; ಅಕ್ಕಪಕ್ಕ ಕೂತ್ರೂ ಗಪ್‌ಚುಪ್

Spread the love

ಮೈಸೂರು: ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಸಿದ್ದರಾಮಯ್ಯ  ಹಾಗೂ ಅವರ ಆಪ್ತರಾಗಿದ್ದ ಮಾಜಿ ಸಚಿವ ಕೆ.ವೆಂಕಟೇಶ್  ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡಿದ್ದ ಕೆ.ವೆಂಕಟೇಶ್, ಕಳೆದ ಕೆಲ ದಿನಗಳಿಂದ ಅವರಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಇದೀಗ ಮೈಸೂರಿನಲ್ಲಿ  ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೈಸೂರು ಜಿಲ್ಲಾ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಹಾಗೂ ಕೆ.ವೆಂಕಟೇಶ್ ಇಬ್ಬರೂ ಭಾಗಿಯಾಗಿದ್ದರು. ಅಕ್ಕಪಕ್ಕ ಕುಳಿತಿದ್ದರೂ ಮಾತಿಲ್ಲ, ಕಥೆಯಿಲ್ಲ.

ಮತ್ತೊಂದೆಡೆ ಮತ್ತೊಬ್ಬ ಮಾಜಿ ಸಚಿವ, ಸಿದ್ದರಾಮಯ್ಯ ಆಪ್ತ ಡಾ.ಹೆಚ್.ಸಿ. ಮಹದೇವಪ್ಪ ಕಾರ್ಯಕ್ರಮಕ್ಕೆ ಗೈರಾಗಿದ್ದು, ಸಿದ್ದು ಜೊತೆಗಿನ ಮುನಿಸು ಮುಂದುವರೆಸಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಮೈಸೂರಿಗೆ ಬಂದಾಗಲೆಲ್ಲ ಅವರ ಜೊತೆ ಕಾಣಿಸಿಕೊಳ್ಳುತ್ತಿದ್ದ ಮಹದೇವಪ್ಪ, ಸಿದ್ದರಾಮಯ್ಯರಿಂದ ಅಂತರ ಕಾಯ್ದುಕೊಂಡಿದ್ದಾರೆ.


Spread the love

About Laxminews 24x7

Check Also

ಡಿಸೆಂಬರ್ – ಜನವರಿಗೆ ಮೊದಲ ಹಂತದಲ್ಲಿ 5 ಲಕ್ಷ ಸೈಟು ಹಂಚಿಕೆ: ಡಿಸಿಎಂ ಪರಮೇಶ್ವರ್‌

Spread the loveಬೆಂಗಳೂರು: ರಾಜ್ಯದ ಜನರಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರ ರೂಪಿಸಿರುವ ಯೋಜನೆಯಡಿ ಡಿಸೆಂಬರ್‌–ಜನವರಿಯಲ್ಲಿ ಮೊದಲ ಹಂತದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ