Breaking News

ಹೊಸಕೋಟೆಯಲ್ಲಿ ಭೀಕರ ಅಗ್ನಿ ಅವಘಡ; ಕೆಮಿಕಲ್ ಬ್ಲಾಸ್ಟ್ ಆಗಿ ಹೊತ್ತಿ ಉರಿದ ಕಂಟೇನರ್

Spread the love

ಬೆಂಗಳೂರು: ಹೊಸಕೋಟೆ ನಗರದ ಸಂತೆ ಸರ್ಕಲ್‌ನಲ್ಲಿ ಸಂಜೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಲಾರಿ ಕಂಟೇನರ್ ತಯಾರಿಸುವ ಗ್ಯಾರೇಜ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಕಂಟೇನರ್‌ ಧಗಧಗನೇ ಹೊತ್ತಿ ಉರಿದಿದೆ.

ನಗರದ ಸಂತೆ ಸರ್ಕಲ್ ಬಳಿಯ ʼಕಾರ್ತಿಕ್ ಇಂಜಿನಿಯರಿಂಗ್ ವರ್ಕ್ಸ್‌ʼ ಗ್ಯಾರೇಜ್‌ನಲ್ಲಿ ಈ ಘಟನೆ ಸಂಭವಿಸಿದೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ಅಗ್ನಿ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ಲಾರಿ ಪೇಂಟಿಂಗ್ ಮಾಡಲು ಗ್ಯಾರೇಜ್ ಒಳಗೆ ಇಟ್ಟಿದ್ದ ಕೆಮಿಕಲ್ ಡಬ್ಬಿಗಳಿಗೆ ಬೆಂಕಿ ತಗುಲಿದ್ದರಿಂದ, ಬೆಂಕಿಯ ಜ್ವಾಲೆ ಇಡೀ ಗ್ಯಾರೇಜ್‌ ವ್ಯಾಪಿಸಿದೆ.

ಕಂಟೇನರ್ ತಯಾರಿಕೆಗೆ ತಂದಿದ್ದ ಲಕ್ಷಾಂತರ ರೂಪಾಯಿ ಬೆಲೆಬಾಳುವ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಈ ಘಟನೆಯಿಂದ ಸುಮಾರು 50 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಬೆಂಕಿ ಹೊತ್ತಿಕೊಂಡ ತಕ್ಷಣ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡಿತ್ತು. ಇದರಿಂದ ಕೆಲಕಾಲ ಸ್ಥಳೀಯರಲ್ಲಿ ಆತಂಕ ಮೂಡಿತ್ತು. ತಕ್ಷಣವೇ ವಿಷಯ ತಿಳಿದು ಸ್ಥಳಕ್ಕೆ ಬಂದ ಎರಡು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸೋಕೆ ಹರಸಾಹಸ ಪಟ್ಟಿದ್ದಾರೆ. ಸದ್ಯ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ವೋಟ್‌ಚೋರಿಗೆ SIR ದುರ್ಬಳಕೆ..? – ಬೆಂಗಳೂರಿನ ಜನರಿಗೂ ಸಿಎಂ ಡಿಕೆಶಿ ಎಚ್ಚರಿಕೆ

Spread the loveಬೆಂಗಳೂರು: ರಾಜ್ಯದಲ್ಲಿ ಎಸ್‌ಐಆರ್ ಫಾರಂ-7 ವಿವಾದ ಮತ್ತೊಂದು ಮಜಲಿಗೆ ತಲುಪಿದೆ. ಬೆಂಗಳೂರಿನಲ್ಲೂ ಎಸ್‌ಐಆರ್ ಸಂಬಂಧ ಇಬ್ಬರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ