Breaking News

ನನಗೆ ಆಶೀರ್ವಾದ ನೀಡಿದಂತೆ ಯತೀಂದ್ರಗೂ ನೀಡಬೇಕು – ಮಾಜಿ ಸಿಎಂ ಸಿದ್ರಾಮಯ್ಯ ಭಾವುಕ ನುಡಿ

Spread the love

ಮೈಸೂರು: ಜಿಲ್ಲೆಯ ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ  ಅವರಿಂದು ಭಾವುಕ ಮಾತುಗಳನ್ನಾಡಿದ್ದಾರೆ. 2028ರ ಚುನಾವಣೆಗೆ ಸ್ಪರ್ಧಿಸುವಂತೆ ಜನರು ಈ ವೇಳೆ ಒತ್ತಾಯ ಕೂಡ ಮಾಡಿದ್ದಾರೆ.

ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದ ಮೇಲೆ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ತವರು ಕ್ಷೇತ್ರ ವರುಣಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ತಮ್ಮ ರಾಜಕೀಯ ಬದುಕಿನಲ್ಲಿ ವರುಣ ಕ್ಷೇತ್ರದ

ವರುಣ ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದು, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾನು ಎರಡು ಬಾರಿ ಮುಖ್ಯಮಂತ್ರಿ ಹಾಗೂ ಎರಡು ಬಾರಿ ವಿರೋಧ ಪಕ್ಷದ ನಾಯಕನಾಗಲು ವರುಣ ಕ್ಷೇತ್ರದ ಜನರ ಆಶೀರ್ವಾದವೇ ಕಾರಣ ಎಂದು ಸಿದ್ದರಾಮಯ್ಯ ಹೇಳಿದರು.

ತಮ್ಮ ರಾಜಕೀಯ ಶ್ರೇಯಸ್ಸಿಗೆ ವರುಣದ ಮತದಾರರೇ ಕಾರಣ. ಶಾಸಕನಾಗಿರಲಿ, ಇಲ್ಲದಿರಲಿ ವರುಣ ಕ್ಷೇತ್ರದ ಸೇವೆಯನ್ನು ಮುಂದುವರಿಸುತ್ತೇನೆ. ವರುಣ ಕ್ಷೇತ್ರವನ್ನು ತಾನು ಯಾವತ್ತೂ ಮರೆಯುವುದಿಲ್ಲ. ತಾನು ರಾಜ್ಯದಲ್ಲಿ ಎಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದೇನೆ. ರಾಹುಲ್ ಗಾಂಧಿ ಯಾವಾಗ ಹೇಳುತ್ತಾರೋ ಅವತ್ತೇ ಮುಖ್ಯಮಂತ್ರಿ ಸ್ಥಾನ ಬಿಡುತ್ತೇನೆ ಎಂದು 4-5 ಬಾರಿ ಹೇಳಿದ್ದೆ. ಅದರಂತೆ ನಡೆದುಕೊಂಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

40 ವರ್ಷಗಳ ರಾಜಕೀಯ ಜೀವನದಲ್ಲಿ ಸೋಲು-ಗೆಲುವು ಎರಡನ್ನೂ ನೋಡಿದ್ದೇನೆ. ಎಂಟು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನುಡಿದಂತೆ ನಡೆದಿದ್ದೇನೆ ಎಂಬ ತೃಪ್ತಿ ಮತ್ತು ಸಂತೋಷ ನನಗಿದೆ. ಇನ್ನೂ ಒಂದೂವರೆ ವರ್ಷ ಶಾಸಕನಾಗಿ ಇರುತ್ತೇನೆ. ನೀವು ನನಗೆ ಆಶೀರ್ವಾದ ನೀಡಿದಂತೆ ಯತೀಂದ್ರ ಸಿದ್ದರಾಮಯ್ಯ ಅವರಿಗೂ ವರುಣದ ಜನರ ಆಶೀರ್ವಾದ ಇರಬೇಕು ಎಂದು ಮನವಿ ಮಾಡಿದರು.

ಈ ವೇಳೆ 2028ರ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಸಿದ್ದರಾಮಯ್ಯ ಅವರನ್ನ ಒತ್ತಾಯಿಸಿದರು. ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸಿದ್ದರಾಮಯ್ಯ ತಮ್ಮ ಭಾಷಣ ಮುಗಿಸಿದರು.


Spread the love

About Laxminews 24x7

Check Also

ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೆ SIT ರಚನೆ: ಪ್ರಿಯಾಂಕ್ ಖರ್ಗೆ

Spread the loveಬೆಂಗಳೂರು: ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಫಾರ್ಮ್-7 ದುರ್ಬಳಕೆ ಬಗ್ಗೆ ವಿಶೇಷ ತನಿಖಾ ತಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ