Breaking News

ಯುಪಿ ರಾಜ್ಯಸಭಾ ಚುನಾವಣೆ: ಬಿಜೆಪಿ 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಹರ್ದೀಪ್, ಸ್ಮೃತಿಗೆ ಇಲ್ಲ ಟಿಕೆಟ್‌

Spread the love

ಲಕ್ನೋ: ಉತ್ತರ ಪ್ರದೇಶದಿಂದ ಅಕ್ಟೋಬರ್ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಎಂಟು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ಸಾಮಾಜಿಕ ಸಮೀಕರಣ ಹಾಗೂ ಪ್ರಮುಖ ಜಾತಿಗಳ ಸಮತೋಲನ ಕಾಯ್ದುಕೊಂಡು ಪಟ್ಟಿ ಸಿದ್ಧಪಡಿಸಲಾಗಿದ್ದು, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಪ್ರಮುಖ ನಾಯಕರಿಗೆ ಟಿಕೆಟ್ ಕೈತಪ್ಪಿರುವುದು ಅಚ್ಚರಿಗೆ ಕಾರಣವಾಗಿದೆ.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಕೇಂದ್ರ ರಾಜ್ಯ ಸಚಿವ ಬಿ.ಎಲ್. ವರ್ಮಾ ಹಾಗೂ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಹೆಸರುಗಳು ಈ ಬಾರಿ ಪಟ್ಟಿಯಲ್ಲಿರಲಿವೆ ಎಂಬ ನಿರೀಕ್ಷೆಯಿತ್ತು. ಆದರೆ ಇವರಿಗೆ ಟಿಕೆಟ್ ನೀಡದಿರುವುದು ಕೇಂದ್ರ ಸಚಿವ ಸಂಪುಟ ಪುನಾರಚನೆಯ ಸುಳಿವನ್ನು ನೀಡಿದೆ.

ಧರಂಪಾಲ್ ಸಿಂಗ್(ಉತ್ತರ ಪ್ರದೇಶ ರಾಜ್ಯ ಸಚಿವ), ರಾಧಾಕಾಂತ್ ಓಜಾ(ಹಿರಿಯ ವಕೀಲರು), ಪ್ರಕಾಶ್ ಪಾಲ್ (ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷ), ವಿದ್ಯಾಸಾಗರ್ ಸೋಂಕರ್(ಮಾಜಿ ಸಂಸದ), ಗೋಪಿಕೃಷ್ಣ ಪಾಂಡೆ, ಪ್ರಿಯಾಂಕಾ ಸಿಂಗ್ ರಾವತ್ (ಮಾಜಿ ಸಂಸದೆ), ರಾಮ್ ಪ್ರತಾಪ್ ಸಿಂಗ್ ಚೌಹಾಣ್(ರಾಜ್ಯ ಪ್ರಧಾನ ಕಾರ್ಯದರ್ಶಿ), ಶ್ರುತಿ ಗಂಗ್ವಾರ್ (ಜಾರ್ಖಂಡ್ ರಾಜ್ಯಪಾಲ ಸಂತೋಷ್ ಗಂಗ್ವಾರ್ ಅವರ ಪುತ್ರಿ) ಅವರಿಗೆ ಟಿಕೆಟ್‌ ನೀಡಿದೆ.

ಮುಂಬರುವ ಮಹತ್ವದ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಜಾತಿ ಸಮತೋಲನಕ್ಕೆ ಹೆಚ್ಚಿನ ಒತ್ತು ನೀಡಿದೆ ಮೂವರು ಒಬಿಸಿ, ಸಾಮಾನ್ಯ ವರ್ಗದ ಮೂವರು(ಇಬ್ಬರು ಬ್ರಾಹ್ಮಣರು ಹಾಗೂ ಒಬ್ಬ ರಜಪೂತ ಸಮುದಾಯದವರು) ಪರಿಶಿಷ್ಟ ಜಾತಿಯ ಇಬ್ಬರನ್ನು ಕಣಕ್ಕಿಳಿಸಿದೆ.

ಉತ್ತರ ಪ್ರದೇಶದ ಒಟ್ಟು 10 ರಾಜ್ಯಸಭಾ ಸ್ಥಾನಗಳಿಗೆ ಅಕ್ಟೋಬರ್ 16 ರಂದು ಮತದಾನ ನಡೆಯಲಿದೆ. ವಿಧಾನಸಭೆಯ ಸಂಖ್ಯಾಬಲದ ಪ್ರಕಾರ ಬಿಜೆಪಿ ಏಳು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಸಾಮರ್ಥ್ಯ ಹೊಂದಿದ್ದು, ಎಂಟನೇ ಸ್ಥಾನವನ್ನೂ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಪ್ರಯತ್ನ ನಡೆಸುತ್ತಿದೆ. ಮತ್ತೊಂದೆಡೆ ಈಗಾಗಲೇ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಸಮಾಜವಾದಿ ಪಕ್ಷ ಮೂರನೇ ಅಭ್ಯರ್ಥಿಯನ್ನೂ ಕಣಕ್ಕಿಳಿಸುವ ಸಾಧ್ಯತೆ ಇರುವುದರಿಂದ ಕನಿಷ್ಠ ಒಂದು ಸ್ಥಾನಕ್ಕೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡುವ ಸೂಚನೆ ಸಿಕ್ಕಿದೆ.

ಘೋಷಿತ ಎಲ್ಲಾ ಎಂಟು ಮಂದಿ ಬಿಜೆಪಿ ಅಭ್ಯರ್ಥಿಗಳು ನಾಳೆ (ಮಂಗಳವಾರ) ಬೆಳಿಗ್ಗೆ 11:30 ಕ್ಕೆ ಲಕ್ನೋದಲ್ಲಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಪಂಕಜ್ ಚೌಧರಿ ಉಪಸ್ಥಿತರಿರಲಿದ್ದಾರೆ.

ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಎಕ್ಸ್ ನಲ್ಲಿ ಅಭಿನಂದನೆ ಸಲ್ಲಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಇಂದು ಘೋಷಣೆಯಾದ ಎಲ್ಲಾ ಗೌರವಾನ್ವಿತ ಅಭ್ಯರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು. ಪ್ರತಿಯೊಬ್ಬರ ಐತಿಹಾಸಿಕ ವಿಜಯಕ್ಕಾಗಿ ಅನಂತ ಶುಭ ಹಾರೈಕೆಗಳು ಎಂದು ಬರೆದುಕೊಂಡಿದ್ದಾರೆ.


Spread the love

About Laxminews 24x7

Check Also

ಡಿಸೆಂಬರ್ – ಜನವರಿಗೆ ಮೊದಲ ಹಂತದಲ್ಲಿ 5 ಲಕ್ಷ ಸೈಟು ಹಂಚಿಕೆ: ಡಿಸಿಎಂ ಪರಮೇಶ್ವರ್‌

Spread the loveಬೆಂಗಳೂರು: ರಾಜ್ಯದ ಜನರಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರ ರೂಪಿಸಿರುವ ಯೋಜನೆಯಡಿ ಡಿಸೆಂಬರ್‌–ಜನವರಿಯಲ್ಲಿ ಮೊದಲ ಹಂತದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ