Breaking News

ಬೆಂಗಳೂರಿನಲ್ಲಿ ವರುಣನ ಅಬ್ಬರ: ರಸ್ತೆಗಳು ಜಲಾವೃತ, ಸಂಜೆ ಹೊತ್ತಲ್ಲಿ ಟ್ರಾಫಿಕ್ ಜಾಮ್‌

Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ವೇಳೆಗೆ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದ ಪರಿಣಾಮ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಭಾರೀ ಮಳೆಗೆ ರಸ್ತೆಗಳ ಮೇಲೆ ನೀರು ನದಿಯಂತೆ ಹರಿಯುತ್ತಿದೆ. ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಶೇಷಾದ್ರಿಪುರಂ ಸೇರಿದಂತೆ ನಗರದ ಹಲವು ಅಂಡರ್‌ಪಾಸ್‌ ಹಾಗೂ ಮುಖ್ಯ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನಗಳು ಮುಳುಗುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನ ಸವಾರರು ರಸ್ತೆಯಲ್ಲಿ ಮುಂದೆ ಸಾಗಲು ಹರಸಾಹಸ ಪಡುವಂತಾಗಿದೆ.

ಬೆಂಗಳೂರು ಉತ್ತರ ಹಾಗೂ ಕೇಂದ್ರ ಭಾಗದಲ್ಲಿ ಮಳೆಯ ಪ್ರಮಾಣ ತೀವ್ರವಾಗಿದ್ದು, ಪ್ರಮುಖ ಬಡಾವಣೆಗಳು ಮಳೆಗೆ ತತ್ತರಿಸಿವೆ. ಗೊರಗುಂಟೆಪಾಳ್ಯ, ಎಂಟನೇ ಮೈಲಿ, ದಾಸರಹಳ್ಳಿ ಹಾಗೂ ರಾಜಾಜಿನಗರ ಸುತ್ತಮುತ್ತ ಧಾರಾಕಾರ ಮಳೆಯಾಗಿದೆ.

ಹೆಬ್ಬಾಳ, ಎಂ.ಜಿ. ರೋಡ್, ಜಕ್ಕೂರು, ಟಿ.ಸಿ. ಪಾಳ್ಯ, ಶಿವಾಜಿನಗರ, ಗಾಂಧಿನಗರ ಹಾಗೂ ಕೆ.ಆರ್. ಪುರಂ ಭಾಗಗಳಲ್ಲಿ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡಿದೆ. ಶೇಷಾದ್ರಿಪುರಂ ಮುಖ್ಯರಸ್ತೆಯಲ್ಲಿ ಮೊಣಕಾಲುದ್ದ ನೀರು ನಿಂತು ವಾಹನ ಸಂಚಾರಕ್ಕೆ ಭಾರೀ ಅಡಚಣೆಯಾಗಿದೆ.

ಸಂಜೆ ಶಾಲೆ-ಕಾಲೇಜುಗಳು ಮುಗಿಯುವ ಹಾಗೂ ಕಚೇರಿಗಳಿಂದ ನೌಕರರು ಮನೆಗೆ ಮರಳುವ ‘ಪೀಕ್ ಅವರ್’ (Peak Hour) ಸಮಯದಲ್ಲೇ ಮಳೆ ಅಪ್ಪಳಿಸಿರುವುದರಿಂದ ಪ್ರಮುಖ ರಸ್ತೆಗಳಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಹೆಬ್ಬಾಳ ಫ್ಲೈಓವರ್, ಗೊರಗುಂಟೆಪಾಳ್ಯ ಜಂಕ್ಷನ್ ಹಾಗೂ ಎಂ.ಜಿ. ರಸ್ತೆಗಳಲ್ಲಿ ವಾಹನಗಳು ಗಂಟೆಗಟ್ಟಲೆ ಸಾಲುಗಟ್ಟಿ ನಿಲ್ಲುವಂತಾಗಿದೆ. ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಜಾಗರೂಕರಾಗಿ ಸಂಚರಿಸುವಂತೆ ಸಂಚಾರ ಪೊಲೀಸರು ಸೂಚಿಸಿದ್ದಾರೆ.


Spread the love

About Laxminews 24x7

Check Also

ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೆ SIT ರಚನೆ: ಪ್ರಿಯಾಂಕ್ ಖರ್ಗೆ

Spread the loveಬೆಂಗಳೂರು: ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಫಾರ್ಮ್-7 ದುರ್ಬಳಕೆ ಬಗ್ಗೆ ವಿಶೇಷ ತನಿಖಾ ತಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ