Breaking News

ಬೀದರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗ ಹೊತ್ತಿ ಉರಿದ ಮನೆ

Spread the love

ಬೀದರ್: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಧಗಧಗ ಹೊತ್ತಿ ಉರಿದ ಘಟನೆ ಬೀದರ್  ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮುಧ್ನಾಳ್  ಗ್ರಾಮದಲ್ಲಿ ನಡೆದಿದೆ.

ಚುಕ್ಕೆಮ್ಮ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದ್ದರಿಂದ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು

ಮನೆಯ ಕಿಚನ್ ರೂಂ ಹಾಗೂ ಹಾಲ್‌ಗೆ ಆವರಿಸಿದ ಬೆಂಕಿಯಿಂದ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಾನುಗಳು ಬೆಂಕಿಗೆ ಆಹುತಿಯಾಗಿವೆ. ಮನೆಯಲ್ಲಿದ್ದ ಫ್ರಿಡ್ಜ್, ದಿನಸಿ ಸಾಮಗ್ರಿ ಹಾಗೂ ಇತರೆ ವಸ್ತುಗಳು ಬೆಂಕಿಯ ಕೆನ್ನಾಲೆಗೆ ಸುಟ್ಟು ಭಸ್ಮವಾಗಿವೆ.

ಆಗ್ನಿಶಾಮಕ ಸಿಬ್ಬಂದಿಗೆ ಗ್ರಾಮಸ್ಥರು ಕರೆ ಮೂಲಕ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅದೃಷ್ಟವಶಾತ್ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಿಟಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಭೀಕರ ಬರ 46 ಸಾವಿರ ಕೋಟಿ ನಷ್ಟ, ಈ ವರ್ಷ ಜಿಎಸ್‌ಟಿ ಸಂಗ್ರಹ ಕುಸಿತ: ಜಿ. ಪರಮೇಶ್ವರ್‌

Spread the loveಬೆಂಗಳೂರು: ಕೇಂದ್ರದ ಬರ ಅಧ್ಯಯನ ತಂಡ ರಾಜ್ಯದಲ್ಲಿ ಪರಿಶೀಲನೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ