Breaking News

ಕಲಬುರಗಿಯಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ – ತೊಗರಿ ಹೊಲದಲ್ಲಿ ಲ್ಯಾಂಡಿಂಗ್‌

Spread the love

ಕಲಬುರಗಿ: ತಾಂತ್ರಿಕ ದೋಷದಿಂದ ತರಬೇತಿ ವಿಮಾನವೊಂದು ರೈತರ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಆಗಿರುವ ಘಟನೆ ಕಲಬುರಗಿ  ವಿಮಾನ ನಿಲ್ದಾಣದ ಸಮೀಪ ನಡೆದಿದೆ.

ತೊಗರಿ ಹೊಲದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದ್ದು, ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ವಿಮಾನವನ್ನು ಜಮೀನಿನಲ್ಲಿ ಸುರಕ್ಷಿತವಾಗಿ ಇಳಿಸಿದ್ದಾರೆ. ಇದರಿಂದ ಭಾರಿ ಅನಾಹುತ ತಪ್ಪಿದೆ. 

ಘಟನೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಂತ್ರಿಕ ದೋಷವೇ ಘಟನೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ