Breaking News

ಸಿಬ್ಬಂದಿ ಸೋಂಕು: ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿ ಸೀಲ್ ಡೌನ್!

Spread the love

ಚಿಕ್ಕೋಡಿ, ಜುಲೈ.27: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಚಿಕ್ಕೋಡಿಯ ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೇರಿದಂತೆ ಮಿನಿ ವಿಧಾನಸೌಧದಲ್ಲಿ 10ಕ್ಕೂ ಹೆಚ್ಚು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಕೊರೊನಾ ಭಯ: ಚಿಕ್ಕೋಡಿಯಲ್ಲಿ ಸ್ವಯಂ ಪ್ರೇರಿತ ಬಂದ್

ಪುರಸಭೆ ಮುಖ್ಯಾಧಿಕಾರಿ ಡಾ.ಸುಂದರ ರೋಗಿ ನೇತೃತ್ವದಲ್ಲಿ ಮಿನಿ ವಿಧಾನಸೌಧಕ್ಕೆ ಕ್ರಿಮಿನಾಶಕ ಸಿಂಪಡಿಸಲಾಗುತ್ತಿದೆ.

ಇನ್ನು, ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ದೃಢಪಟ್ಟಿರುವ ಹಿನ್ನಲೆ ಸಾರ್ಜಜನಿಕರಲ್ಲಿ ಆತಂಕ ಹೆಚ್ಚಾಗಿದೆ.

ಬೆಳಗಾವಿಯಲ್ಲಿ ಒಂದೇ ದಿನ 163 ಮಂದಿಗೆ ಸೋಂಕು:

ಕಳೆದ 24 ಗಂಟೆಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 163 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಒಂದೇ ದಿನ ಮಹಾಮಾರಿಗೆ ಜಿಲ್ಲೆಯಲ್ಲಿ ಆರು ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ಇನ್ನು, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 2149ಕ್ಕೆ ಏರಿಕೆಯಾಗಿದೆ. ಈ ಪೈಕಿ 642 ಮಂದಿ ಸೋಂಕಿತರು ಗುಣಮುಖರಾಗಿದ್ದು, ಬಾಕಿ ಉಳಿದಿರುವ 1461 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ