Breaking News

ದೇವರ ಕೋಣೆಯಲ್ಲೇ ಕೆಜಿಗಟ್ಟಲೆ ಗಾಂಜಾ ಸಂಗ್ರಹ; 22 ವರ್ಷದ ಯುವಕ ಅರೆಸ್ಟ್

Spread the love

ಗದಗ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 22 ವರ್ಷದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ.

ಬಸವರಾಜ ಹರಣಶಿಕಾರಿ ಬಂಧಿತ ಆರೋಪಿ. ಮನೆಯಲ್ಲೇ ಗಾಂಜಾ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯ ದೇವರ ಕೋಣೆಯಲ್ಲಿ ಸಂಗ್ರಹಿಸಿಟ್ಟಿದ್ದ 2 ಕೆಜಿ 91 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಪ್ತಿ ಮಾಡಲಾದ ಗಾಂಜಾದ ಮೌಲ್ಯ ಸುಮಾರು 1 ಲಕ್ಷ 4,550 ರೂಪಾಯಿ ಎಂದು ತಿಳಿದುಬಂದಿದೆ. ದೇವರ ಕೋಣೆಯಲ್ಲಿ ಕೆಜಿ ಗಟ್ಟಲೆ ಗಾಂಜಾ ಸಂಗ್ರಹಿಸಿರುವುದು ಪೊಲೀಸರಿಗೂ ಅಚ್ಚರಿ ಮೂಡಿಸಿದೆ.

ಆರೋಪಿಯ ವಿಚಾರಣೆ ವೇಳೆ ಮಹಾರಾಷ್ಟ್ರದಿಂದ ಗಾಂಜಾವನ್ನು ತಂದು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆ ಗಾಂಜಾ ದಂಧೆಯ ಹಿಂದೆ ಇರುವ ಜಾಲದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ