Breaking News

ನಾಳೆಯೇ ಜಿ.ಪಂ., ತಾ.ಪಂ. ಮೀಸಲು ಪ್ರಾಥಮಿಕ ಕರಡು ಅಧಿಸೂಚನೆ: ಈಶ್ವರ ಖಂಡ್ರೆ

Spread the love

ಚಿಕ್ಕಮಗಳೂರು: ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿಗಳ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲು ಪೂರ್ಣಗೊಂಡಿದ್ದು, ನಾಳೆಯೊಳಗೆ ಪ್ರಾಥಮಿಕ ಕರಡು ಅಧಿಸೂಚನೆ ಹೊರಬೀಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ  ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಅವರು, ಮೊದಲಿಗೆ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು. ನಮ್ಮ ಸರ್ಕಾರ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಬದ್ಧವಾಗಿದ್ದು, ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಪ್ರಾಥಮಿಕ ಕರಡು ಅಧಿಸೂಚನೆ ಹೊರಡಿಸಿದ ತರುವಾಯ ಆಕ್ಷೇಪಣೆ ಸಲ್ಲಿಕೆಗೆ 10 ದಿನಗಳ ಕಾಲಾವಕಾಶ ನೀಡಲಾಗುವುದು. ನಂತರ ರಾಜ್ಯ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಚುನಾವಣೆ ನಡೆಸುವ ಜವಾಬ್ದಾರಿ ಆಯೋಗ ನಿರ್ವಹಿಸುತ್ತದೆ ಎಂದರು.

ವರ್ಷಾಂತ್ಯದೊಳಗೆ ಜಿ.ಪಂ., ತಾಪಂ ಚುನಾವಣೆ ಖಚಿತವಾಗಿ ನಡೆಯುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಎಸ್‌ಐಆರ್. ಪ್ರಕ್ರಿಯೆ ನಡೆಯುತ್ತಿದ್ದು, ಅಂತಿಮ ಮತದಾರರ ಪಟ್ಟಿಯನ್ನು ನೀಡಲು ಕೇಂದ್ರ ಚುನಾವಣಾ ಆಯೋಗ ವಿಳಂಬ ಮಾಡಿದರೆ, ಜನವರಿ ತಿಂಗಳಲ್ಲಿ ಚುನಾವಣೆ ಆಗಬಹುದು ಎಂದು ತಿಳಿಸಿದರು.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳಿಗೆ ಶಾಕ್‌ ಶಾಕ್‌ – 100ಕ್ಕೂ ಹೆಚ್ಚು ಮನೆಗಳ ಮೇಲೆ ಪೊಲೀಸರ ದಾಳಿ

Spread the loveಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ