Breaking News

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

Spread the love

ನವದೆಹಲಿ: ಈಶಾನ್ಯ ದೆಹಲಿಯ  ಸೀಮಾಪುರಿ ಪ್ರದೇಶದಲ್ಲಿ ಬುಧವಾರ ಐದು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಹಲವರು ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸತ್ಯ ನಿಕೇತನದಲ್ಲಿ ಏಳು ಮಂದಿಯ ಸಾವಿಗೆ ಕಾರಣವಾದ ಹಾಸ್ಟೆಲ್ ದುರಂತ ಸಂಭವಿಸಿದ ಒಂದು ತಿಂಗಳ ಬೆನ್ನಲ್ಲೇ ಈ ಅವಘಡ ಆಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಅಗ್ನಿಶಾಮಕ ದಳಕ್ಕೆ  ಮಧ್ಯಾಹ್ನ 3:30ರ ಸುಮಾರಿಗೆ ಕಟ್ಟಡ ಕುಸಿದಿರುವ ಕುರಿತು ಕರೆ ಬಂದಿತು. ತಕ್ಷಣವೇ ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು.

ಸೀಮಾಪುರಿಯಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದ್ದು, ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿವೆ. ಸೀಮಾಪುರಿ ಗೋಲ್ ಚಕ್ಕರ್, ಡಿಎಲ್‌ಎಫ್ ಭೋಪೂರ ಮತ್ತು ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಗಿದೆ. ದಯವಿಟ್ಟು ಈ ಪ್ರದೇಶದಲ್ಲಿ ಸಂಚಾರ ಮಾಡಬೇಡಿ. ಘಟನಾ ಸ್ಥಳದ ಬಳಿ ವಾಹನಗಳನ್ನು ನಿಲ್ಲಿಸುವುದು, ಪಾರ್ಕ್ ಮಾಡುವುದು ಅಥವಾ ಗುಂಪುಗೂಡುವುದನ್ನು ಮಾಡಬೇಡಿ. ಸಂಚಾರ ಪೊಲೀಸರ ಸೂಚನೆಗಳನ್ನು ಪಾಲಿಸಿ ಎಂದು ದೆಹಲಿ ಸಂಚಾರ ಪೊಲೀಸರು ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳಿಗೆ ಶಾಕ್‌ ಶಾಕ್‌ – 100ಕ್ಕೂ ಹೆಚ್ಚು ಮನೆಗಳ ಮೇಲೆ ಪೊಲೀಸರ ದಾಳಿ

Spread the loveಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ