Breaking News

ಸವದತ್ತಿ ಯಲ್ಲಮ್ಮ ದೇವಿ ಭಕ್ತರಿಗೆ ಗುಡ್ ನ್ಯೂಸ್

Spread the love

ಬೆಳಗಾವಿ: ಸವದತ್ತಿಯ ಶ್ರೀ ಯಲ್ಲಮ್ಮಾದೇವಿ ದಸರಾ ಜಾತ್ರೆ ಅಕ್ಟೋಬರ್ 10ರಿಂದ 21ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಜಾತ್ರೆಗೆ ಆಗಮಿಸುವ ಭಕ್ತರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಜಾತ್ರೆಯ ಪ್ರಮುಖ ದಿನಗಳಾದ ಅಕ್ಟೋಬರ್ 11, 13, 15, 17, 18 ಹಾಗೂ 19ರಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಬೆಳಗಾವಿ ಕೇಂದ್ರ ಹಾಗೂ ನಗರ ಬಸ್ ನಿಲ್ದಾಣಗಳಿಂದ ಸವದತ್ತಿ ಯಲ್ಲಮ್ಮಾ ಗುಡ್ಡಕ್ಕೆ ಹಾಗೂ ಯಲ್ಲಮ್ಮಾ ಗುಡ್ಡದಿಂದ ಬೆಳಗಾವಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷ ಬಸ್‌ಗಳನ್ನು ಓಡಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ವಾಕರಸಾ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವು

Spread the loveಹುಬ್ಬಳ್ಳಿ: ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ  ನಡೆದಿದೆ. ಹುಬ್ಬಳ್ಳಿ ಉಣಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ