Breaking News

ಬೆಳಗಾವಿಯಲ್ಲಿ ‘ಸೇವಾ ಜ್ಯೋತಿ ಯಾತ್ರೆ: ಸಾವಿರಾರು ಕಾರ್ಯಕರ್ತರಿಂದ ಸ್ವಾಗತ

Spread the love

ಬೆಳಗಾವಿ: ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ‘ಸೇವಾ ಜ್ಯೋತಿ ಯಾತ್ರೆ’ ಬೆಳಗಾವಿಗೆ ಆಗಮಿಸಿತು.

ಬೆಳಗಾವಿ ಗ್ರಾಮಾಂತರ, ಬೆಳಗಾವಿ ಮಹಾನಗರ ಹಾಗೂ ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಆಯೋಜಿಸಿದ್ದ ‘ವಿಕಸಿತ ಭಾರತ ಸಂಕಲ್ಪ ಸಮಾವೇಶ’ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ನೇರಪ್ರಸಾರವನ್ನು ಎಲ್‌ಇಡಿ ಪರದೆಯ ಮೂಲಕ ಸಾವಿರಾರು ಕಾರ್ಯಕರ್ತರು ವೀಕ್ಷಿಸಿದರು. ಕಾರ್ಯಕ್ರಮದ ವೇಳೆ ನೂತನವಾಗಿ ನಿರ್ಮಿಸಿರುವ ‘ಸೇವಾ ಜ್ಯೋತಿ ವೃತ್ತ’ವನ್ನು ಮುಖಂಡರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಜಗದೀಶ ಶೆಟ್ಟರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಶಾಸಕರಾದ ಅಭಯ ಪಾಟೀಲ, ವಿಠ್ಠಲ ಹಲಗೇಕರ, ದುರ್ಯೋಧನ ಐಹೊಳೆ, ಮಾಜಿ ಸಂಸದ ಈರಣ್ಣ ಕಡಾಡಿ, ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ದೊಡಗೌಡರ, ಮಹಾಂತೇಶ ಕವಟಗಿಮಠ, ಅರವಿಂದ ಪಾಟೀಲ, ಮಹೇಶ ಕುಮಠಳ್ಳಿ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.


Spread the love

About Laxminews 24x7

Check Also

ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವು

Spread the loveಹುಬ್ಬಳ್ಳಿ: ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ  ನಡೆದಿದೆ. ಹುಬ್ಬಳ್ಳಿ ಉಣಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ