Breaking News

ವೇದಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

Spread the love

ಬಳ್ಳಾರಿ: ಈಜಲು  ತೆರಳಿದ್ದ ಬಾಲಕನೋರ್ವ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಳ್ಳಾರಿ  ಜಿಲ್ಲೆ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದ ಬಳಿ ಹರಿಯುವ ವೇದಾವತಿ ನದಿಯಲ್ಲಿ  ನಡೆದಿದೆ.

ರಾರಾವಿ ಗ್ರಾಮದ ಓಂ ಪ್ರಸಾದ್ (15) ಮೃತ ಬಾಲಕ. 10ನೇ ತರಗತಿಯಲ್ಲಿ ಓದುತ್ತಿದ್ದ ಮೃತ ಬಾಲಕ ಓಂ ಪ್ರಸಾದ್, ಶಾಲೆಗೆ ರಜೆ ಹಿನ್ನೆಲೆ ಮಂಗಳವಾರ ಸಂಜೆ ಸ್ನೇಹಿತರ ಜೊತೆ ವೇದಾವತಿ ನದಿಗೆ ಈಜಾಡಲು ತೆರಳಿದ್ದ. ನೀರಿನ ಆಳ ಅರಿಯದೇ ನದಿಗೆ ಇಳಿದಾಗ, ನದಿಯ ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿದ್ದ.

ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಅಗ್ನಿ ಶಾಮಕ ಸಿಬ್ಬಂದಿ ಜೊತೆ ಸ್ಥಳೀಯರೂ ಸೇರಿ ಶೋಧ ಕಾರ್ಯ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಇಂದು ಬೆಳಗ್ಗೆ ಬಾಲಕನ ಶವ ಪತ್ತೆಯಾಗಿದೆ. ಘಟನೆ ಸಂಬಂಧ ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವು

Spread the loveಹುಬ್ಬಳ್ಳಿ: ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ  ನಡೆದಿದೆ. ಹುಬ್ಬಳ್ಳಿ ಉಣಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ