Breaking News

ಹರಿಗೆ ಗ್ರಾಮದಲ್ಲಿ ಬೀಗರೂಟ ಬ್ಯಾನ್ – ಊಟ ಹಾಕಿಸಿದ್ರೆ 1 ಲಕ್ಷ, ಊಟ ಮಾಡಿದ್ರೆ 50 ಸಾವಿರ ದಂಡ

Spread the love

ಶಿವಮೊಗ್ಗ: ರಾಜ್ಯದಲ್ಲಿ ತೀವ್ರ ಬರಗಾಲಕ್ಕೆ  ರೈತರು, ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ಶಿಕಾರಿಪುರ  ತಾಲೂಕಿನ ಹರಿಗೆ ಗ್ರಾಮಸ್ಥರು ಬೀಗರೂಟಕ್ಕೆ  ನಿಷೇಧ ಹೇರಿದ್ದಾರೆ.

ಗ್ರಾಮಸ್ಥರು ಸಂಪ್ರದಾಯ ಬದಿಗಿರಿಸಿ, ಆರ್ಥಿಕ ಶಿಸ್ತಿಗೆ ಮಹತ್ವ ನೀಡಿದ್ದಾರೆ. ಬಿಗರೂಟ ಹಾಕಿದರೆ 1 ಲಕ್ಷ ರೂ. ದಂಡ ಹಾಗೂ ಊಟ ಮಾಡಿದ್ರೆ 50 ಸಾವಿರ ರೂ. ದಂಡ ಹಾಕಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಇದರಿಂದ ಬಡವರು ಹಾಗೂ ಮಧ್ಯಮ ವರ್ಗದವರ ಆರ್ಥಿಕ ಹೊರೆ ಭಾರೀ ಇಳಿಕೆಯಾಗಲಿದೆ.

ಇತ್ತೀಚೆಗೆ ಮಲೆನಾಡು ಭಾಗದಲ್ಲಿ ಬಡ – ಮಧ್ಯಮ ಕುಟುಂಬಗಳು ಪ್ರತಿಷ್ಠೆಗಾಗಿ ಸಾಲ ಮಾಡಿ, ಬೀಗರೂಟ ಆಯೋಜಿಸುತ್ತಿದ್ದರು. ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕುತ್ತಿದ್ದ ಹಿನ್ನೆಲೆ ಈ ನಿರ್ಣಯ ಕೈಗೊಳ್ಳಲಾಗಿದೆ. ಬೇರೆ ಗ್ರಾಮಕ್ಕೆ ಹೋಗಿ ಬೀಗರೂಟ ಮಾಡಿದರೆ 50 ಸಾವಿರ ರೂ. ದಂಡ ವಿಧಿಸಲು ಸಹ ಗ್ರಾಮಸ್ಥರು ಮುಂದಾಗಿದ್ದಾರೆ.

ಗ್ರಾಮದ ದೇವಾಲಯದಲ್ಲಿ ಸಭೆ ನಡೆಸಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಣಯದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ಚರ್ಚೆ ಆರಂಭವಾಗಿದೆ.


Spread the love

About Laxminews 24x7

Check Also

ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವು

Spread the loveಹುಬ್ಬಳ್ಳಿ: ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ  ನಡೆದಿದೆ. ಹುಬ್ಬಳ್ಳಿ ಉಣಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ