ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇತ್ತೀಚೆಗಷ್ಟೆ ನಟಿ ಐಶ್ವರ್ಯಾ ರೈ ಮತ್ತು ಆರಾಧ್ಯ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೀಗ ಅವರು ಕೋವಿಡ್ ಡೆಸ್ಟ್ ಮಾಡಿಸಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ. ಅಲ್ಲದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಕೂಡ ಆಗಿದ್ದಾರೆ. ಈ ಬಗ್ಗೆ ಅಭಿಷೇಕ್ ಬಚ್ಚನ್ ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ನಿಮ್ಮ ನಿರಂತರ ಪ್ರಾರ್ಥನೆ ಮತ್ತು ಶುಭಾಶಯಗಳಿಗೆ ಧನ್ಯವಾದಗಳು. ಐಶ್ವರ್ಯ ಮತ್ತು ಆರಾಧ್ಯ ಇಬ್ಬರಿಗೂ ಕೋವಿಡ್ ನೆಗೆಟಿವ್ ಬಂದಿದೆ. ಅವರು ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದು, ಈಗ ಮನೆಯಲ್ಲಿದ್ದಾರೆ. ನಾನು ಮತ್ತು ನನ್ನ ತಂದೆ ವೈದ್ಯಕೀಯ ಸಿಬ್ಬಂದಿಯ ಆರೈಕೆಯಲ್ಲಿ ಆಸ್ಪತ್ರೆಯಲ್ಲಿದ್ದೇನೆ” ಎಂದು ಟ್ವೀಟ್ ಮಾಡುವ ಮೂಲಕ ಅಭಿಷೇಕ್ ಬಚ್ಚನ್ ತಿಳಿಸಿದ್ದಾರೆ.
ಜು. 11 ರಂದು ಹಿರಿಯ ನಟ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್‍ಗೆ ಮೊದಲು ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದಾದ ನಂತರ ನಟಿ ಐಶ್ವರ್ಯಾ ರೈ ಅವರಿಗೂ ಮತ್ತು ಪುತ್ರಿ ಆರಾಧ್ಯ ಬಚ್ಚನ್ ಅವರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಎಲ್ಲರೂ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.