Breaking News

ಜಯನಗರ ಪೊಲೀಸ್ ಠಾಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಭೇಟಿ

Spread the love

ಬೆಂಗಳೂರು: ಜಯನಗರ ಕ್ಷೇತ್ರದಲ್ಲಿ ವೋಟರ್ ಐಡಿ (ಮತದಾರರ ಪಟ್ಟಿ) ಪರಿಶೀಲನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾಗಿರುವ ಸುಳ್ಳು ಎಫ್‌ಐಆರ್ ಅನ್ನು ಖಂಡಿಸಿ ಹಾಗೂ ಇದನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ, ಪ್ರತಿಭಟನೆ ನಡೆಸಿದರು.

ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಜಯನಗರ ಕ್ಷೇತ್ರದ ಶಾಸಕ ಸಿ.ಕೆ.ರಾಮಮೂರ್ತಿ ಅವರ ನೇತೃತ್ವದಲ್ಲಿ ಜಯನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮನವಿ ಸಲ್ಲಿಸಲಾಯಿತು

ಫಾರ್ಮ್-7 ಸಲ್ಲಿಕೆ ವಿವಾದ:
ನಕಲಿ ಹಾಗೂ ಡಬಲ್ ಎಂಟ್ರಿ ಮತದಾರರ ಹೆಸರುಗಳ ಪರಿಶೀಲನೆಗೆ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ಫಾರ್ಮ್-7 ಸಲ್ಲಿಸಿದ್ದರೂ, ಅದನ್ನು ರಾಜಕೀಯ ದುರುದ್ದೇಶದಿಂದ ತಿರುಚಿ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ಹೂಡಲಾಗಿದೆ ಎಂದು ಮುಖಂಡರು ಆರೋಪಿಸಿದರು.

ಚುನಾವಣಾಧಿಕಾರಿ ಹಾಗೂ ಪೊಲೀಸರ ವಿರುದ್ಧ ಅಸಮಾಧಾನ:
ಗೌಪ್ಯವಾಗಿಡಬೇಕಾದ ಅರ್ಜಿಗಳನ್ನು ಕಾಂಗ್ರೆಸ್ ಕಾರ್ಯಕರ್ತರ ಕೈಗೆ ತಲುಪಿಸಿ, ತರಾತುರಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಈ ಸುಳ್ಳು ಎಫ್‌ಐಆರ್ ಅನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಮಕ್ಕಳಾಗದ ವಿಚಾರಕ್ಕೆ ಗಲಾಟೆ; ತವರಿನಿಂದ ಹಣ ತರಲು ನಿರಾಕರಿಸಿದ ಪತ್ನಿಯನ್ನೇ ಕೊಲೆಗೈದ ಪತಿ

Spread the loveಕಲಬುರಗಿ: ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ ಮಾಡಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ