ಬಾಲಿವುಡ್ನ ಹಿರಿಯ ನಟ ನಾನಾ ಪಾಟೇಕರ್ ಇಂದು ನಿಧನರಾಗಿದ್ದು, ಅವರು ಅಭಿನಯಕ್ಕೆ ಮಾತ್ರ ಸೀಮಿತವಾಗದೆ ಸಮಾಜ ಸೇವೆ, ದೇಶಸೇವೆಯಲ್ಲೂ ಸಹ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಾರ್ಗಿಲ್ ಯುದ್ಧದ ಸಮಯದಲ್ಲಿ ಭಾರತೀಯ ಸೇನೆಗೆ ಸೇರಿ ದೇಶಸೇವೆ ಮಾಡಿದ್ದರು.
1991ರಲ್ಲಿ ತೆರೆಕಂಡ ‘ಪ್ರಹಾರ್ ದಿ ಫೈನಲ್ ಅಟ್ಯಾಕ್’ ಸಿನಿಮಾದ ಕಮಾಂಡೋ ಪಾತ್ರಕ್ಕಾಗಿ ನಾನಾ ಪಾಟೇಕರ್ ಅವರು, ಮರಾಠಾ ಲೈಟ್ ಇನ್ವೆಂಟ್ರಿ ಜೊತೆ ಮೂರು ವರ್ಷಗಳ ಕಾಲ ಕಠಿಣ ಸೇನಾ ತರಬೇತಿ ಪಡೆದಿದ್ದರು. ಈ ತರಬೇತಿಯ ನಂತರ ಅವರು 1980ರ ದಶಕದ ಉತ್ತರಾರ್ಧದಲ್ಲಿ ಟೆರಿಟೋರಿಯಲ್ ಆರ್ಮಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು.
ಈ ತರಬೇತಿಯಿಂದಲೇ ಅವರು 1999ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕಾರ್ಗಿಲ್ ಯುದ್ಧ ಸಂಭವಿಸಿದಾಗ, ಗಡಿಯಲ್ಲಿ ಸೇವೆ ಸಲ್ಲಿಸುವುದಾಗಿ ಹಿರಿಯ ಅಧಿಕಾರಿಗಳನ್ನು ಕೋರಿದ್ದರು. ರಕ್ಷಣಾ ಸಚಿವರು ಮಾತ್ರ ಇದಕ್ಕೆ ಅನುಮತಿ ನೀಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದರು. ಕೂಡಲೇ ಆಗಿನ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರನ್ನು ಸಂಪರ್ಕಿಸಿ ಸೇವೆ ಸಲ್ಲಿಸಲು ಅನುಮತಿ ಪಡೆದಿದ್ದರು.
ಅನುಮತಿ ಸಿಕ್ಕ ಬಳಿಕ ನಟನೆಯನ್ನು ತಾತ್ಕಾಲಿಕವಾಗಿ ಬಿಟ್ಟು ಸೇನೆಯ ಕ್ವಿಕ್ ರಿಯಾಕ್ಷನ್ ಟೀಮ್ ಸೇರಿಕೊಂಡಿದ್ದರು. ಶ್ರೀನಗರ, ಡ್ರಾಸ್, ಮತ್ತು ಲೇತ್ನಂತಹ ಗಡಿ ಪ್ರದೇಶಗಳಲ್ಲಿ ಸೈನಿಕರೊಂದಿಗೆ ಸುಮಾರು 60 ದಿನಗಳನ್ನು ಕಳೆದಿದ್ದರು. ಈ ಕಠಿಣ ಸೇವೆಯ ಸಮಯದಲ್ಲಿ 76 ಕೆಜಿ ತೂಕವಿದ್ದ ಅವರು, ಸುಮಾರು 20 ಕೆಜಿ ತೂಕವನ್ನು ಕಳೆದುಕೊಂಡಿದ್ದರು.
ನಾನಾ ಪಾಟೇಕರ್ ಅವರು ಗುರುವಾರ ಬೆಳಿಗ್ಗೆ ತೀವ್ರ ಹೃದಯ ಸ್ತಂಭನದಿಂದ ವಿಧಿವಶರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿದ್ದಾಗ ಇಂದು ಬೆಳಿಗ್ಗೆ ಸುಮಾರು 5:20ರ ಸುಮಾರಿಗೆ ತೀವ್ರ ಹೃದಯ ಸ್ತಂಭನ ಆಗಿತ್ತು. ತಕ್ಷಣವೇ ಅವರನ್ನು ರಕ್ಷಿಸಲು ವೈದ್ಯರು ಸತತ 45 ನಿಮಿಷಗಳ ಕಾಲ ನಿರಂತರವಾಗಿ ಸಿಪಿಆರ್ ಪ್ರಕ್ರಿಯೆ ನಡೆಸಿದರಾದರೂ, ಯಾವುದೇ ಸ್ಪಂದನೆ ಸಿಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ಆಂಕೊಲಾಜಿ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಸಾಲ್ಕರ್ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಅವರ ಸಾವಿಗೆ ಪ್ರಧಾನಿ ಮೋದಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
Laxmi News 24×7