Breaking News

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಡಿಕೆಶಿ ಬಾಂಬ್

Spread the love

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಸಚಿವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲಾಗುತ್ತಿದೆ ಎಂಬ ಚರ್ಚೆಗಳ ಬೆನ್ನಲ್ಲೇ, ಖುದ್ದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಬಳಿಗೂ ಕೆಲವರು ಜಿಎಸ್‌ಟಿ ಇತ್ಯಾದಿ ಬೇರೆ ಬೇರೆ ವಿಚಾರಗಳನ್ನು ಮಾತನಾಡಲು ಬಂದಿದ್ದರು. ನನ್ನಿಂದಲೇ ಈ ಸ್ಟಿಂಗ್ ಆಪರೇಷನ್ ಆರಂಭಿಸಲು ಯತ್ನಿಸಿದ್ದರು ಎಂದು ತಿಳಿಸಿದರು.

ನನಗೆ ಅವರ ಮೇಲೆ ಮುಂಚಿತವಾಗಿಯೇ ಅನುಮಾನ ಬಂದ ಹಿನ್ನೆಲೆಯಲ್ಲಿ, ಪೊಲೀಸರ ಮೂಲಕ ಸಂಪೂರ್ಣ ಮಾಹಿತಿ ಪಡೆದು ಎಲ್ಲಾ ದಾಖಲೆಗಳು ಹಾಗೂ ಫೋಟೋಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದೇನೆ. ಅಗತ್ಯಬಿದ್ದರೆ ಫೋಟೋಗಳನ್ನು ಬಿಡುಗಡೆ ಮಾಡುತ್ತೇನೆ. ಈ ಷಡ್ಯಂತ್ರದ ಹಿಂದೆ ಯಾರ್ಯಾರಿದ್ದಾರೆ, ಯಾರು ಇದಕ್ಕೆ ಹಣಕಾಸು ಒದಗಿಸುತ್ತಿದ್ದಾರೆ ಇದರ ಪಿತಾಮಹ ಯಾರು ಎಂಬುದು ನನಗೆ ಸ್ಪಷ್ಟವಾಗಿ ತಿಳಿದಿದೆ. ಕುಂಬಳಕಾಯಿ ಕಳ್ಳ ಅಂದರೆ ಕೆಲವರು ಹೆಗಲು ಮುಟ್ಟುಕೊಳ್ತಿದ್ದಾರೆ ಎಂದು ಹೇಳಿದರು.

ಈ ಹಿಂದೆ 2000ರ ಆಸುಪಾಸಿನಲ್ಲೂ ನನ್ನ ವಿರುದ್ಧ ಇಂತಹ ಷಡ್ಯಂತ್ರಗಳು ನಡೆದಿದ್ದವು. ಸುಖಾಸುಮ್ಮನೆ ಟ್ರಾಪ್ ಮಾಡಲು ಜನರು ಬರುತ್ತಾರೆ, ಎಚ್ಚರಿಕೆಯಿಂದ ಇರಿ ಎಂದು ನಮ್ಮ ಅಧಿಕಾರಿಗಳಿಗೆ, ಸಚಿವರಿಗೆ ಸೂಚನೆ ನೀಡಿದ್ದೇನೆ.ಇದರಲ್ಲಿ ಕರ್ನಾಟಕದವರೇ ಇದ್ದಾರಾ ಅಥವಾ ಹೊರರಾಜ್ಯದವರಾ ಎಂಬ ವಿವರಗಳನ್ನು ಈಗಲೇ ಬಹಿರಂಗಪಡಿಸುವುದಿಲ್ಲ, ಕಾಲವೇ ಎಲ್ಲದಕ್ಕೂ ತಕ್ಕ ಉತ್ತರ ನೀಡಲಿದೆ ಎಂದು ತಿಳಿಸಿದರು.

Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಕೇಸ್‌- ಸುಪ್ರೀಂನಲ್ಲೂ ದರ್ಶನ್‌ಗೆ ಬಿಗ್‌ ಶಾಕ್‌

Spread the loveನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ  ಮತ್ತೊಂದು ಭಾರಿ ಕಾನೂನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ