Breaking News

ಆನ್‌ಲೈನ್‌ ಗೇಮ್‌ನಲ್ಲಿ ಹಣ ಹೂಡಿಕೆಗೆ ಸ್ನೇಹಿತರಿಂದ ಕಿರುಕುಳ, ಕೊಲೆ ಬೆದರಿಕೆ – 13ರ ಬಾಲಕ ಆತ್ಮಹತ್ಯೆ

Spread the love

ದಾವಣಗೆರೆ: ಆನ್‌ಲೈನ್ ಗೇಮ್‌ನಲ್ಲಿ ಹಣ ಹೂಡಿಕೆ ಮಾಡಲು ಸ್ನೇಹಿತರು ನೀಡಿದ ನಿರಂತರ ಕಿರುಕುಳ, ಜೀವ ಬೆದರಿಕೆ ಹಾಗೂ ಹಲ್ಲೆಗೆ ಬೇಸತ್ತು 13 ವರ್ಷದ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಾಲೂಕಿನ ಪಾಂಡೊಮಟ್ಟಿ ಗ್ರಾಮದಲ್ಲಿ ನಡೆದಿದೆ.

ಮಾಚನಾಯಕನಹಳ್ಳಿಯ ಬಸವ ಇಂಟರ್ನ್ಯಾಷನಲ್ ಸ್ಕೂಲ್‌ನಲ್ಲಿ 8ನೇ ತರಗತಿ ಓದುತ್ತಿದ್ದ ಮನೋಜ್ ಟಿ.ಆರ್. (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದು, ಫ್ರೀ ಫೈರ್ ಗೇಮಿಂಗ್ ಆಪ್‌ನಲ್ಲಿ ಹಣ ಹಾಕುವಂತೆ ಗ್ರಾಮದ ನಾಲ್ವರು ಬಾಲಕರು ಮನೋಜ್‌ನ ಮೇಲೆ ನಿರಂತರವಾಗಿ ಒತ್ತಡ ಹೇರುತ್ತಿದ್ದರು. ಅವರ ಬೆದರಿಕೆಗೆ ಅಂಜಿದ ಮನೋಜ್, ಮನೆಯಲ್ಲಿದ್ದ ಸುಮಾರು 4 ಲಕ್ಷ ರೂಪಾಯಿ ಹಣವನ್ನ ಹಂತ-ಹಂತವಾಗಿ ತಂದು ಆ ಬಾಲಕರಿಗೆ ನೀಡಿದ್ದ ಎನ್ನಲಾಗಿದೆ.

ಇತ್ತೀಚೆಗೆ ಮನೆಯಲ್ಲಿದ್ದ ಹಣದಲ್ಲಿ ವ್ಯತ್ಯಾಸ ಕಂಡುಬಂದಾಗ ಪೋಷಕರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಾಲ್ವರು ಬಾಲಕರು ಹಣ ತರುವಂತೆ ಒತ್ತಾಯಿಸುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಮನೆಯಲ್ಲಿ ವಿಷಯ ತಿಳಿದ ಬಳಿಕವೂ ಆ ಬಾಲಕರು ಹಣ ತರಲೇಬೇಕೆಂದು ಮನೋಜ್‌ಗೆ ಪೀಡಿಸುತ್ತಿದ್ದರು. ಹಣ ತರದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ್ದಲ್ಲದೆ, ಕೆಲವು ಬಾರಿ ಬಾಲಕನ ಮೇಲೆ ಹಲ್ಲೆ ಕೂಡ ನಡೆಸಿದ್ದರೆಂದು ಮೃತನ ಪೋಷಕರು ಆರೋಪಿಸಿದ್ದಾರೆ.

ಇದರಿಂದ ತೀವ್ರ ಮಾನಸಿಕ ಭಯ ಹಾಗೂ ಖಿನ್ನತೆಗೊಳಗಾದ ಮನೋಜ್ ಮನೆಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ತಮ್ಮ ಮಗನ ಸಾವಿಗೆ ಕಾರಣರಾದ ಹಾಗೂ ಹಣಕ್ಕಾಗಿ ಕಿರುಕುಳ ನೀಡಿದ ನಾಲ್ವರು ಬಾಲಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಮನೋಜ್ ಪೋಷಕರು ದೂರು ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಅಂಬಾರಿ ತೂಕ ತಡೆಯಲಾಗದೇ ತಾಲೀಮು ಅರ್ಧಕ್ಕೆ ಮೊಟಕು – ಬಹುತೇಕ ಕ್ಯಾಪ್ಟನ್ ರೇಸ್‌ನಿಂದ ಮಹೇಂದ್ರ ಔಟ್

Spread the loveಮೈಸೂರು: ಈ ಬಾರಿ ದಸರಾದಲ್ಲಿ  ಅಂಬಾರಿ ಹೊರುವ ಆನೆ ಯಾವುದು ಅನ್ನೋದು ಇನ್ನೂ ಕುತೂಹಲವಾಗಿಯೇ ಇದೆ. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ