Breaking News

ಬೆಂಗ್ಳೂರಿನಿಂದ ಬೈಕ್ ಖರೀದಿಸಿ ಬೀದರ್‌ಗೆ ಬರುತ್ತಿದ್ದಾಗ ಭೀಕರ ಅಪಘಾತ – ಇಬ್ಬರು ಸ್ನೇಹಿತರು ದುರ್ಮರಣ

Spread the love

ಬೀದರ್: ಬೆಂಗಳೂರಿನಿಂದ ಬೈಕ್ ಖರೀದಿಸಿ ಬೀದರ್‌ಗೆ ಬರುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಸ್ನೇಹಿತರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೆಲಂಗಾಣದ  ಸಂಗಾರೆಡ್ಡಿಯ 9ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೀದರ್  ತಾಲೂಕಿನ ಯರನಳ್ಳಿ ಗ್ರಾಮದ ಸಾಯಿಕಿರಣ ಜೀತಪ್ಪ ಜೋಶಿ (25) ಮತ್ತು ನಾಗೇಶ್ ಮಾಣಿಪ್ಪ ಅಣ್ಣಾ (24) ಸಾವನಪ್ಪಿದ ಇಬ್ಬರು ಸ್ನೇಹಿತರು ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಇಬ್ಬರು ಸ್ನೇಹಿತರು ಬೈಕ್‌ವೊಂದನ್ನು ಖರೀದಿಸಿ, ಬೀದರ್‌ಗೆ ಬರುತ್ತಿದ್ದರು. ಈ ವೇಳೆ ಲಾರಿಯೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ತೆಲಂಗಾಣ ಪೊಲೀಸರು ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಬೀದರ್ ಮೂಲದ ಯುವಕರು ಎಂದು ಗುರುತಿಸಿದ್ದಾರೆ. ಸಂಗಾರೆಡ್ಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳಿಗೆ ಶಾಕ್‌ ಶಾಕ್‌ – 100ಕ್ಕೂ ಹೆಚ್ಚು ಮನೆಗಳ ಮೇಲೆ ಪೊಲೀಸರ ದಾಳಿ

Spread the loveಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ