Breaking News

ಕರ್ನಾಟಕಕ್ಕೆ ಮತ್ತೆ ಶಾಕ್‌ – 15 ದಿನ ತಮಿಳುನಾಡಿಗೆ ಹರಿಯಲಿದೆ 3 ಸಾವಿರ ಕ್ಯೂಸೆಕ್‌

Spread the love

ನವದೆಹಲಿ: 15 ದಿನಗಳ ಅವಧಿಗೆ ಪ್ರತಿದಿನ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ  ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ  ಕರ್ನಾಟಕಕ್ಕೆ  ಆದೇಶಿಸಿದೆ.

ಇಂದು ಬೆಳಗ್ಗೆ ಸಭೆ ನಡೆಸಿಸಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ  ಪ್ರತಿದಿನ 3 ಸಾವಿರ ಕ್ಯೂಸೆಕ್‌ ನಂತೆ ಒಟ್ಟು 15 ದಿನಗಳ ಕಾಲ 3.91 ಟಿಎಂಸಿ ನೀರನ್ನು ಹರಿಸುವಂತೆ ಶಿಫಾರಸು ಮಾಡಿತ್ತು. ಈ ಶಿಫಾರಸನ್ನು ಪಾಲಿಸುವಂತೆ  ಕರ್ನಾಟಕಕ್ಕೆ ಸೂಚಿಸಿದೆ.

ರಾಜ್ಯದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಹಾಗೂ ಕೆಆರ್‌ಎಸ್, ಹೇಮಾವತಿ, ಹಾರಂಗಿ ಮತ್ತು ಕಬಿನಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿದಿರುವುದರಿಂದ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಮನವಿ ಮಾಡಿದ ಮನವಿಯನ್ನು ಪ್ರಾಧಿಕಾರ ಒಪ್ಪಿಗೆ ನೀಡಲಿಲ್ಲ.


Spread the love

About Laxminews 24x7

Check Also

ಅಂಬಾರಿ ತೂಕ ತಡೆಯಲಾಗದೇ ತಾಲೀಮು ಅರ್ಧಕ್ಕೆ ಮೊಟಕು – ಬಹುತೇಕ ಕ್ಯಾಪ್ಟನ್ ರೇಸ್‌ನಿಂದ ಮಹೇಂದ್ರ ಔಟ್

Spread the loveಮೈಸೂರು: ಈ ಬಾರಿ ದಸರಾದಲ್ಲಿ  ಅಂಬಾರಿ ಹೊರುವ ಆನೆ ಯಾವುದು ಅನ್ನೋದು ಇನ್ನೂ ಕುತೂಹಲವಾಗಿಯೇ ಇದೆ. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ