Breaking News

CJP ಪ್ರತಿಭಟನೆಗೆ ಸಜ್ಜು; ಮೆಟ್ರೋ ನಿರ್ಬಂಧ, ರೈಲುಗಳ ರದ್ದು, 23,000 ಪೊಲೀಸರ ನಿಯೋಜನೆ

Spread the love

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್‌ ಜನತಾ ಪಾರ್ಟಿ ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಹಿನ್ನೆಲೆ ದೆಹಲಿ ಪೊಲೀಸರು  ಫುಲ್‌ ಅಲರ್ಟ್‌ ಆಗಿದ್ದಾರೆ. ದೆಹಲಿಯಲ್ಲಿ ಮೆಟ್ರೋ ನಿರ್ಬಂಧಿಸಲಾಗಿದೆ. ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಸ್ಥಳದಲ್ಲಿ 23,000 ಪೊಲೀಸರನ್ನು ನಿಯೋಜಿಸಲಾಗಿದೆ.

ನವದೆಹಲಿ, ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಗಳಿಗೆ ಬರುವ ರೈಲುಗಳ ಸಂಚಾರಕ್ಕೆ ಅಡ್ಡಿಪಡಿಸಲಾಗಿದೆ. ಅ.10ರ ಮುಂಜಾನೆ 4ರಿಂದ ಮಧ್ಯಾಹ್ನ 2ರವರೆಗೆ ನಿಗದಿಯಾಗಿದ್ದ ಹಲವು ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.

ಅಕ್ಟೋಬರ್‌ 9ರ ಮಧ್ಯಾಹ್ನ 2 ಗಂಟೆಯ ಬಳಿಕ ಮೂಲ ನಿಲ್ದಾಣದಿಂದ ಹೊರಟು, ನಾಳೆ ನಿಗದಿತ ಅವಧಿಯಲ್ಲಿ ದೆಹಲಿ ತಲುಪಬೇಕಿದ್ದ ರೈಲುಗಳು ಮೂಲ ನಿಲ್ದಾಣದಿಂದಲೇ ರದ್ದುಪಡಿಸಲಾಗಿದೆ. ರೈಲು ನಿಲ್ದಾಣಗಳ ಸುತ್ತಮುತ್ತ ಭಾರಿ ವಾಹನ ದಟ್ಟಣೆ ಉಂಟಾಗುವ ಆತಂಕ ಇದೆ.‌

ಸಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಭದ್ರತೆ, ಸಂಚಾರ ನಿರ್ಬಂಧಗಳ ಸಿದ್ಧತೆಯಾಗಿದೆ. ಪ್ರಯಾಣಿಕರು ಪ್ರಯಾಣ ಆರಂಭಿಸುವ ಮುನ್ನ ರೈಲಿನ ಸ್ಥಿತಿಗತಿ ಪರಿಶೀಲಿಸುವಂತೆ ಸೂಚನೆ ನೀಡಲಾಗಿದೆ.

ಪ್ರತಿಭಟನೆಗೆ ಅನುಮತಿ ನಿರಾಕರಣೆ
ಜಂತರ್‌ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಯಾವುದೇ ಪ್ರತಿಭಟನೆಗೆ ಅನುಮತಿ ಕೋರಿ 10 ದಿನಗಳ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು. ಆದರೆ, ಅದ್ಯಾವುದೇ ನಿಯಮ ಪಾಲಿಸಿಲ್ಲ. ಅಲ್ಲದೆ, ಹಿಂದಿನ ಪ್ರತಿಭಟನೆಯ ಸಂದರ್ಭದಲ್ಲಿ ಮಾರ್ಗಸೂಚಿಗಳ ಉಲ್ಲಂಘನೆ ನಡೆದಿದೆ. ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎಂದು ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರಲು ಧನಂಜಯನ ಆಯ್ಕೆ ಬಹುತೇಕ ಖಚಿತ

Spread the loveಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಅನ್ನೋ ಕುತೂಹಲಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ