Breaking News

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ; ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Spread the love

ರಾಮನಗರ: ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ ಮತ್ತು ಸತ್ರ ನ್ಯಾಯಾಲಯ ಈ ತೀರ್ಪು ನೀಡಿದ್ದು, ಪ್ರಮುಖ ಆರೋಪಿ ಲೋಕೇಶ್‌ಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ

ಎರಡನೇ ಆರೋಪಿ ಗುರುಪ್ರಸಾದ್‌ಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ಪಂಚಾಕ್ಷರಿ ಆದೇಶ ಹೊರಡಿಸಿದ್ದಾರೆ.

2020ರಲ್ಲಿ ನಡೆದಿದ್ದ ಘಟನೆ
2020ರ ಅಕ್ಟೋಬರ್‌ನಲ್ಲಿ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಆರೋಪಿಗಳು ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಆ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದರು.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಕುದೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗಳ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದೆ. ಅಲ್ಲದೆ, ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಮಂಜೂರು ಮಾಡಿ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ವಿರಾಜಪೇಟೆ | ಹೇರೂರು ಎಸ್ಟೇಟ್ ಬಳಿ ಹುಲಿ ಪ್ರತ್ಯಕ್ಷ – ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಎಚ್ಚರಿಕೆ

Spread the loveಮಡಿಕೇರಿ: ವಿರಾಜಪೇಟೆ  ತಾಲೂಕಿನ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಹುಲಿಯೊಂದು ಕಾಣಿಸಿಕೊಂಡಿದೆ. ಸಿದ್ದಾಪುರ – ಮೈಸೂರು ಮುಖ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ