ಧಾರವಾಡ: ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಸ್ವಿಫ್ಟ್ ಕಾರು, ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ಅಜೀತ್, ರಾಕೇಶ್, ಸಂದೀಪ್, ಮತ್ತು ಶೃತಿ ಮೃತ ದುರ್ದೈವಿಗಳು. ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು, ಕ್ಯಾಂಟರ್ಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರೆಲ್ಲ ವಿಜಯಪುರ ಜಿಲ್ಲೆಯವರು ಎಂದು ತಿಳಿದು ಬಂದಿದೆ. ನವಲಗುಂದ ತಾಲೂಕು ಆಸ್ಪತ್ರೆಗೆ ಶವಗಳನ್ನು ರವಾನಿಸಲಾಗಿದೆ. ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Laxmi News 24×7