Breaking News

ಅಕ್ರಮವಾಗಿ ಸಂಗ್ರಹಿಸಿದ್ದ 150 ನಾಡಬಾಂಬ್, ಬಂದೂಕು ವಶ – 35 ವರ್ಷದ ವ್ಯಕ್ತಿಯ ಬಂಧನ

Spread the love

ಚಿಕ್ಕಬಳ್ಳಾಪುರ: ಜಿಲ್ಲೆಯ ​ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 150ಕ್ಕೂ ಹೆಚ್ಚು ನಾಡಬಾಂಬ್‌ಗಳು  ಹಾಗೂ ನಾಡಬಂದೂಕೊಂದನ್ನ ಜಪ್ತಿ ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 35 ವರ್ಷದ ನರಸಿಂಹಪ್ಪ ಎಂಬ ವ್ಯಕ್ತಿಯನ್ನ ಬಟ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ ಖಚಿತ ಮಾಹಿತಿ ಆಧರಿಸಿ ಬಟ್ಲಹಳ್ಳಿ ಪೊಲೀಸರು  ದಾಳಿ ನಡೆಸಿದ್ದು, ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 150 ನಾಡಬಾಂಬ್‌ಗಳು ಹಾಗೂ ಒಂದು ನಾಡಬಂದೂಕನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯು ಇಷ್ಟೊಂದು ಬೃಹತ್ ಪ್ರಮಾಣದ ಸ್ಫೋಟಕಗಳು ಮತ್ತು ಬಂದೂಕನ್ನು ಏತಕ್ಕಾಗಿ ಹಾಗೂ ಯಾವುದಕ್ಕಾಗಿ ಸಂಗ್ರಹಿಸಿಟ್ಟಿದ್ದ ಎಂಬ ಕುರಿತು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.


Spread the love

About Laxminews 24x7

Check Also

ಬಿಜೆಪಿಯ ಬಿಎಲ್ಎಗಳ ಮೇಲೆ ಎಫ್ಐಆರ್‌; ಹೈಕೋರ್ಟ್‌ನಿಂದ ಮಧ್ಯಂತರ ತಡೆ

Spread the loveಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ  ಪ್ರಕ್ರಿಯೆಯಲ್ಲಿ, ಫಾರ್ಮ್ 7 ಸಲ್ಲಿಕೆಗೆ ಸಂಬಂಧಿಸಿದಂತೆ ಬಿಜೆಪಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ