ವಿಜಯಪುರ:ಬಾಯಿ ಚಪಲಕ್ಕೆ ಏನಾದ್ರೂ ಹೇಳೋದು ಸರಿಯಲ್ಲ ಎಂದು ಶಾಸಕ ಗಣಿಗ ರವಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಸ್ಟಿಂಗ್ ಆಪರೇಷನ್ಗೆ ಸುಪಾರಿ ನೀಡಿದ್ದಾರೆ ಎಂಬ ಶಾಸಕ ಗಣಿಗ ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಾಯಿ ಚಪಲಕ್ಕೆ ಏನಾದ್ರೂ ಹೇಳೋದು ಸರಿಯಲ್ಲ. ಚಪಲಕ್ಕಾಗಿ ಹೇಳಿಕೆ ಕೊಡೋದು ಸರಿಯಲ್ಲ. ಅದು ಪಕ್ಷಕ್ಕೂ ಹಾಗೂ ಅವರಿಗೂ ಒಳ್ಳೆಯದಲ್ಲ ಎಂದಿದ್ದಾರೆ.
ಇದು ಮೂರ್ಖತನದ ಹೇಳಿಕೆ. ಜವಾಬ್ದಾರಿಯುತ ಸ್ಥಾನದಲ್ಲಿರುವವ ಶಾಸಕರು ಇಂತಹ ಆರೋಪ ಮಾಡಬಾರದು. ಪುರಾವೆಗಳಿದ್ದರೆ ಬಿಡುಗಡೆ ಮಾಡಲಿ. ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಮಾಡುವ ಪಿತಾಮಹ ಯಾರು ಎಂದು ಕಾಂಗ್ರೆಸ್ ಪಕ್ಷದ ಶಾಸಕರಿಗೆ ಗೊತ್ತಿದೆ. ಇಂತಹ ಹೇಳಿಕೆ ಕೊಟ್ಟು ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಯತ್ನ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದರಲ್ಲಿ ಯಾವುದು ಸತ್ಯಾಂಶ ಇಲ್ಲ. ಅಧಿಕಾರಕ್ಕಾಗಿ ಸ್ಟಿಂಗ್ ಆಪರೇಷನ್ ಮಾಡೋದು. ಸ್ಟಿಂಗ್ ಆಪರೇಷನ್ ಮಾಡಿಯೇ ಅಧಿಕಾರ ತೆಗೆದುಕೊಳ್ತಿದ್ದಾರೆ ಎನ್ನುವ ಚರ್ಚೆ ಇದೆ ಎಂದು ಹೇಳುವ ಮೂಲಕ ಸಿಎಂ ಡಿಕೆಶಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
Laxmi News 24×7