ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಕುರಿತಾದ ಫಾರೆನ್ಸಿಕ್ ಲ್ಯಾಬ್ ರಿಪೋರ್ಟ್ ಬಂದಿದೆ.
ಅಂಗಾಂಗಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಸುಶಾಂತ್ ಮೃತದೇಹದ ಮೇಲೆ ಯಾವುದೇ ಬಲ ಪ್ರಯೋಗವಾಗಿಲ್ಲ. ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನುವುದು ದೃಢಪಟ್ಟಿದೆ. ಸುಶಾಂತ್ ಸಿಂಗ್ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಅವರ ಸಾವಿನ ಕುರಿತಂತೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವಿವಿಧ ಆಯಾಮಗಳಿಂದ ಪೊಲೀಸರು ತನಿಖೆ ಕೈಗೊಂಡಿದ್ದರು.
ನೇಣು ಬಿಗಿದ ಕಾರಣ ಉಸಿರುಗಟ್ಟಿ ಅವರು ಸಾವನ್ನಪ್ಪಿದ್ದಾರೆ. ದೇಹದಲ್ಲಿ ಯಾವುದೇ ಹೋರಾಟದ ಗುರುತುಗಳು, ಗಾಯಗಳು ಕಂಡು ಬಂದಿಲ್ಲ. ಅವರ ಉಗುರುಗಳು ಸ್ವಚ್ಛವಾಗಿವೆ. ಇದೊಂದು ಆತ್ಮಹತ್ಯೆ ಪ್ರಕರಣವೆಂದು ಮರಣೋತ್ತರ ವರದಿ ತಿಳಿಸಿದೆ
Laxmi News 24×7