Breaking News

ಕಾಂಗ್ರೆಸ್‌ನಿಂದ ಸುಪ್ರೀಂ ಕೋರ್ಟ್ ಚಲೋ – ದೆಹಲಿಯ 6 ಮೆಟ್ರೋ ನಿಲ್ದಾಣಗಳು ಬಂದ್

Spread the love

ನವದೆಹಲಿ: ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್  ಚಲೋ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಭದ್ರತಾ ದೃಷ್ಟಿಯಿಂದ ಕೇಂದ್ರ ದೆಹಲಿಯ ಪ್ರಮುಖ ಆರು ಮೆಟ್ರೋ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಸೋಮವಾರ ಬೆಳಗ್ಗೆ 6 ರಿಂದ ಸಂಜೆ 4 ಗಂಟೆಯವರೆಗೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ವೇಳೆ 45 ಮೆಟ್ರೋ ನಿಲ್ದಾಣಗಳನ್ನು ಮುಚ್ಚಿದ ಕೇವಲ ಎರಡು ದಿನಗಳ ಬೆನ್ನಲ್ಲೇ ದೆಹಲಿ ಮೆಟ್ರೋ ರೈಲು ನಿಗಮ  ಈ ಹೊಸ ಆದೇಶ ಹೊರಡಿಸಿದೆ.

ಪಟೇಲ್ ಚೌಕ್, ಜನಪಥ್, ರಾಜೀವ್ ಚೌಕ್, ಮಂಡಿ ಹೌಸ್, ಸೆಂಟ್ರಲ್ ಸೆಕ್ರೆಟರಿಯೇಟ್, ಬಾರಾಖಂಬಾ ರಸ್ತೆಯಲ್ಲಿರುವ ನಿಲ್ದಾಣಗಳನ್ನು ಬಂದ್‌ ಮಾಡಲಾಗಿದೆ. ಈ ನಿಲ್ದಾಣಗಳಲ್ಲಿ ಪ್ರವೇಶ ಮತ್ತು ನಿರ್ಗಮನವನ್ನು ನಿರ್ಬಂಧಿಸಲಾಗಿದ್ದರೂ, ಮೆಟ್ರೋ ಮಾರ್ಗ ಬದಲಾವಣೆ  ಸೌಲಭ್ಯವು ಎಂದಿನಂತೆ ಲಭ್ಯವಿರಲಿದೆ

ಮೆಟ್ರೋ ನಿರ್ಬಂಧ ಹಾಗೂ ಬಿಗಿ ಪೊಲೀಸ್ ಭದ್ರತೆಯಿಂದಾಗಿ ದೆಹಲಿಯ ಪ್ರಮುಖ ರಸ್ತೆಗಳಲ್ಲಿ ತೀವ್ರ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಇದಕ್ಕೆ ಪೂರಕವಾಗಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ನೀರು ನಿಂತಿದ್ದು, ಕಚೇರಿಗಳಿಗೆ ತೆರಳುವ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುವ ಸಾಧ್ಯತೆಯಿದೆ.

ವಿಶೇಷ ತೀವ್ರ ಪರಿಷ್ಕರಣೆ  ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಮತ್ತು ಮುಖ್ಯ ಚುನಾವಣಾ ಆಯುಕ್ತ  ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳ ‘ಇಂಡಿಯಾ’  ಒಕ್ಕೂಟ ಸುಪ್ರೀಂ ಕೋರ್ಟ್ ಚಲೋ ನಡೆಸುತ್ತಿದೆ.

ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಂಬುವ ಪ್ರತಿಯೊಬ್ಬ ಭಾರತೀಯನೂ ನಮ್ಮೊಂದಿಗೆ ಹೆಜ್ಜೆ ಹಾಕಲಿದ್ದಾನೆ. ‘ವೋಟ್ ಚೋರಿ’ ನಿಲ್ಲಿಸಲು, SIR ಪ್ರಕ್ರಿಯೆ ರದ್ದುಗೊಳಿಸಲು ಹಾಗೂ ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಾವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಲಿದ್ದೇವೆ ಎಂದು ಕರೆ ನೀಡಿದ್ದಾರೆ.


Spread the love

About Laxminews 24x7

Check Also

ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪ – ಖಂಡ್ರೆ ಸಹೋದರನಿಗೆ ಹೈಕೋರ್ಟ್‌ ನೋಟಿಸ್‌

Spread the loveಬೀದರ್: ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ  ಸಹೋದರ ಅಮರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ