ಹಾವೇರಿ: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ಸರ್ವೆಗೆ ಬಂದಿದ್ದ ವಿಮಾ ಕಂಪನಿ ಸಿಬ್ಬಂದಿ ಗ್ರಾಮ ಪಂಚಾಯತಿ ಸಿಬ್ಬಂದಿಯ ಪ್ಯಾಂಟ್ ಬಿಚ್ಚಿಸಿ ಸರ್ವೆ ಮಾಡಿಸಿ ಅಮಾನವೀಯ ವರ್ತನೆ ತೋರಿದ್ದಾರೆ.
ಹಾವೇರಿಜಿಲ್ಲೆ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಪಕ್ಕೀರಪ್ಪ ಯತ್ನಳ್ಳಿ ಪ್ಯಾಂಟ್ ಬಿಚ್ಚಿಸಿ ಸರ್ವೆ ಮಾಡಿಸಿದ್ದಾರೆ.
ಜಮೀನಿನಲ್ಲಿ ನೀರು ತುಂಬಿದ್ದರಿಂದ, ಈಗಾಗಲೇ ಸ್ಥಳ ಪರಿಶೀಲನೆ ನಡೆಸಿ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ. ಆದರೂ, ಗ್ರಾಮ ಪಂಚಾಯತಿ ಸಿಬ್ಬಂದಿಯ ಪ್ಯಾಂಟ್ ಬಿಚ್ಚಿಸಿ ಸರ್ವೆ ಮಾಡಿಸಿ ಅವಮಾನಿಸಲಾಗಿದೆ. ನಿಯಮಗಳನ್ನು ಪಾಲಿಸದೆ, ಮನಬಂದಂತೆ ಸರ್ವೆ ನಡೆಸಿದ ವಿಮಾ ಕಂಪನಿ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
Laxmi News 24×7