Breaking News

ಕರ್ನಾಟಕಕ್ಕೆ ಸುಧಾ ಯಾದವ್‌ ನೂತನ ರಾಜ್ಯಪಾಲರು; 6 ರಾಜ್ಯಗಳಿಗೆ ಹೊಸ ಗವರ್ನರ್‌ಗಳ ನೇಮಕ

Spread the love

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ  ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಬದಲಾವಣೆಯಲ್ಲಿ ನಾಲ್ವರಿಗೆ ಹೊಸದಾಗಿ ರಾಜ್ಯಪಾಲರ ಜವಾಬ್ದಾರಿ ನೀಡಲಾಗಿದ್ದು, ಇಬ್ಬರು ಹಾಲಿ ರಾಜ್ಯಪಾಲರನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸಲಾಗಿದೆ.

ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿ ಹಿರಿಯ ನಾಯಕಿ ಹಾಗೂ ಪಕ್ಷದ ಸಂಸದೀಯ ಮಂಡಳಿ ಸದಸ್ಯೆ ಡಾ. ಸುಧಾ ಯಾದವ್‌ ಅವರನ್ನು ನೇಮಕ ಮಾಡಲಾಗಿದೆ.

ಇನ್ನು ಸಿಕ್ಕಿಂ ರಾಜ್ಯಪಾಲರಾಗಿದ್ದ ಓಂ ಪ್ರಕಾಶ್‌ ಮಾಥುರ್‌ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ವರ್ಗಾಯಿಸಲಾಗಿದೆ. ಕೇರಳದ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರಿಗೆ ತಮಿಳುನಾಡಿನ ಜವಾಬ್ದಾರಿ ನೀಡಲಾಗಿದೆ.

ಇದೇ ವೇಳೆ, ಒಡಿಶಾದ ನೂತನ ರಾಜ್ಯಪಾಲರಾಗಿ ಬ್ರಜ್‌ ಮೋಹನ್‌ ರಾಮ್‌, ಉತ್ತರಾಖಂಡದ ರಾಜ್ಯಪಾಲರಾಗಿ ಡಾ. ಧಾಲ್‌ ಸಿಂಗ್‌ ಬಿಸೆನ್‌ ಹಾಗೂ ಸಿಕ್ಕಿಂನ ರಾಜ್ಯಪಾಲರಾಗಿ ದುಷ್ಯಂತ್‌ ಗೌತಮ್‌ ಅವರನ್ನು ನೇಮಕ ಮಾಡಲಾಗಿದೆ.

ಈ ನೇಮಕಾತಿಗಳು ಸಂಬಂಧಪಟ್ಟ ರಾಜ್ಯಗಳಲ್ಲಿ ನೂತನ ರಾಜ್ಯಪಾಲರು ಅಧಿಕಾರ ವಹಿಸಿಕೊಳ್ಳುವ ದಿನದಿಂದ ಜಾರಿಗೆ ಬರಲಿವೆ.


Spread the love

About Laxminews 24x7

Check Also

ಧಾರವಾಡದ ಸ್ಟೀಲ್‌ ಅಂಗಡಿಯಲ್ಲಿ ಅಗ್ನಿ ದುರಂತ – ಕಂತೆ ಕಂತೆ ಹಣ ಬೆಂಕಿಗಾಹುತಿ

Spread the loveಧಾರವಾಡ: ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಸ್ಟೀಲ್ ಅಂಗಡಿಗೆ ಬೆಂಕಿ  ತಗುಲಿದ ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮವಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ