ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳಗಾವಿ ಜಿಲ್ಲೆಯ ವಿವಿಧ ಟೋಲ್‌ಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ರೈತರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಟಿ.ಎ. ನಾರಾಯಣಗೌಡ ಬಣದ ಕಾರ್ಯಕರ್ತರು ಬೆಂಬಲ ಸೂಚಿಸಿದ್ದಾರೆ.

ಹತ್ತರಗಿ ಟೋಲ್‌ಗೆ ಆಗಮಿಸಿದ ಕರವೇ ಕಾರ್ಯಕರ್ತರು ರೈತರ ಪ್ರತಿಭಟನೆಗೆ ಕೈಜೋಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ದೀಪಕ್ ಹುಡುನಟ್ಟ ಹಾಗೂ ರಾಜ್ಯ ಸಂಚಾಲಕ ಸುರೇಶ ಗವನ್ನವರ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.