Breaking News

ಕರ್ಲಾನ್ ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ; ಮುಗಿಲೆತ್ತರಕ್ಕೆ ದಟ್ಟ ಹೊಗೆ

Spread the love

ಬೆಂಗಳೂರು: ನಗರದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕರ್ಲಾನ್  ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಹಾಸಿಗೆ ತಯಾರಿಸಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳ ಶೆಡ್‌ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಬೆಂಕಿ ತಗುಲಿದೆ.

ಅಗ್ನಿ ಅವಘಡದಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಎರಡು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಸೌಜನ್ಯ ಪ್ರಕರಣದಲ್ಲಿ ತಂದೆ, ತಾಯಿ ಹಣ ಮಾಡಿಕೊಂಡಿದ್ದಾರೆ – ವಕೀಲ ಅಮೃತೇಶ್ ಗಂಭೀರ ಆರೋಪ

Spread the loveಬೆಂಗಳೂರು: ಸೌಜನ್ಯ ಪ್ರಕರಣದಲ್ಲಿ ಆಕೆಯ ತಂದೆ, ತಾಯಿ ಹಣ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್  ವಕೀಲ ಅಮೃತೇಶ್ ಗಂಭೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ