ಬೆಂಗಳೂರು: ಸಿಲಿಕಾನ್ ಸಿಟಿ ಅರ್ಧ ಲಕ್ಷ ಕೊರೊನಾ ಪ್ರಕರಣಗಳ ಮೈಲಿಗಲ್ಲಿಗೆ ಸನಿಹದಲ್ಲಿದ್ದು, ನಗರದಲ್ಲಿ ಕಂಟೈನ್ಮೆಂಟ್ ಝೋನ್‍ಗಳ ಸಂಖ್ಯೆ ಇದೀಗ 15 ಸಾವಿರ ದಾಟಿದೆ. ಪರಿಸ್ಥಿತಿ ಹೀಗಿರುವಾಗ ಸರ್ಕಾರ ಕೊರೊನಾ ಹತ್ತಿಕ್ಕಲು ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದೆ.
ನಿಯಂತ್ರಣಕ್ಕೆ ಸಿಗದೆ ಗಲ್ಲಿಗಲ್ಲಿಯಲ್ಲಿ ಆರ್ಭಟಿಸುತ್ತಿರುವ ಕೊರೊನಾ ಹತ್ತಿಕ್ಕುವ ನೆಪದಲ್ಲಿ ಸರ್ಕಾರ ದಿನಕ್ಕೊಂದು ನಿಯಮ ಜಾರಿಗೆ ತರುತ್ತಿದ್ದು, ಇಂದು ಸಹ ಹಲವು ರೂಲ್ಸ್ ಜಾರಿ ಮಾಡಲಾಗಿದೆ. ಹೋಮ್ ಐಸೋಲೇಷನ್ ಕುರಿತು ನಿಯಮ ರೂಪಿಸಿದ್ದು, ಈ ನಿಯಮಗಳು ಯಾವ ರೀತಿ ಕಾರ್ಯನಿರ್ವಹಿಸಲಿವೆ ಕಾದು ನೋಡಬೇಕಿದೆ.
Laxmi News 24×7