Breaking News

‘ಶಾಸಕರಿಗೆ ಉಡುಗೊರೆ, ಜನತೆಗೆ ಬರೆ’ ಎಳೆಯುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಲಜ್ಜ : H.D.K.

Spread the love

ಬೆಂಗಳೂರು: ರಾಜ್ಯದ ಜನತೆಗೆ ಉಡುಗೊರೆ ಕೊಡಬೇಕಾಗಿದ್ದ ಸರ್ಕಾರ ಶಾಸಕರ ತೃಪ್ತಿಪಡಿಸುವ ಅನಾಚಾರ ಪ್ರದರ್ಶಿಸಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೊರೊನಾ ಸಂಕಷ್ಟ ಸಮಯದಲ್ಲಿ ಬದುಕಿಗಾಗಿ ಜನತೆ ಹೋರಾಟ ಮಾಡುತ್ತಿದ್ದರೆ. ವರ್ಷಾಚರಣೆಯ ಸಂಭ್ರಮದಲ್ಲೂ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿನಲ್ಲಿ ತನ್ಮಯವಾಗಿರುವ ಬಿಜೆಪಿ ಸರ್ಕಾರ, 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಉಡುಗೊರೆ ನೀಡುವ ಮೂಲಕ ಜನತೆಯ ಆಶೋತ್ತರಗಳಿಗೆ ಕೊಳ್ಳಿ ಇಟ್ಟಿದೆ” ಎಂದಿದ್ದಾರೆ.

“ಸರ್ಕಾರ ಮಾತ್ರವಲ್ಲ, ಜನತೆಯು ಕೂಡ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ಬೊಕ್ಕಸ ಹಾಗೂ ಜನಸಾಮಾನ್ಯನ ಮೇಲೆ ಹೊರೆ ಹೇರುವ ಮೂಲಕ ‘ಶಾಸಕರಿಗೆ ಉಡುಗೊರೆ, ಜನತೆಗೆ ಬರೆ’ ಎಳೆಯುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಲಜ್ಜ ನಡವಳಿಕೆಯನ್ನು ಖಂಡಿಸುತ್ತೇನೆ” ಎಂದಿದ್ದಾರೆ.


Spread the love

About Laxminews 24x7

Check Also

ಬ್ರೇಕ್ ಫೆಲ್ಯೂರ್ ಆಗಿ ಬೈಕ್ – ಕಾರಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್

Spread the loveಬೆಂಗಳೂರು : ಬ್ರೇಕ್ ಫೆಲ್ಯೂರ್ ಆಗಿ ಶಾಲಾ ಬಸ್​ವೊಂದು ನಿಯಂತ್ರಣ ತಪ್ಪಿ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ