Breaking News

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

Spread the love

ಮೈಸೂರು: ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ  ತರಬಾರದಿತ್ತು, ಧೈರ್ಯವಾಗಿ ಎದುರಿಸಿ ಫೈಟ್ ಮಾಡಬೇಕಿತ್ತು,ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೈಸೂರಿನಲ್ಲಿ ಭೇಟಿಯಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಗೌಪ್ಯ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಈ ದಿಢೀರ್ ಭೇಟಿಯ ಕುರಿತು ವಿವರ ನೀಡಲು ನಿರಾಕರಿಸಿದ ಜಾರಕಿಹೊಳಿ, “ಸಿದ್ದರಾಮಯ್ಯ ಅವರು ಯಾವ ಪಕ್ಷದಲ್ಲಿದ್ದರೂ ಅವರು ನಮ್ಮ ನಾಯಕರು. ನಾನು ಈಗ ಆ ಸ್ಟಿಂಗ್ ವಿಚಾರವಾಗಿ ಹೆಚ್ಚು ಮಾತನಾಡುವುದಿಲ್ಲ. ನಾನು ಬೇರೆಯದೇ ವಿಚಾರವಾಗಿ ಅವರನ್ನು ಮಾತನಾಡಿಸಲು ಬಂದಿದ್ದೆ. ಇದು ಖಾಸಗಿ ಭೇಟಿ” ಎಂದು ಸ್ಪಷ್ಟಪಡಿಸಿ ಅಲ್ಲಿಂದ ತೆರಳಿದರು.

ಸುಮಾರು 30 ನಿಮಿಷಗಳಿಗೂ ಅಧಿಕ ಕಾಲ ಉಭಯ ನಾಯಕರ ನಡುವೆ ನಡೆದ ಈ ಸುದೀರ್ಘ ಚರ್ಚೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ.


Spread the love

About Laxminews 24x7

Check Also

ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ – ಮತ್ತೆ ಮೂವರ ಬಂಧನ, 11ಕ್ಕೇರಿದ ಆರೋಪಿಗಳ ಸಂಖ್ಯೆ

Spread the loveಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ  ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ