Breaking News

ಬಡ ರೋಗಿಗಳಿಗೆ ಸೇರಬೇಕಿದ್ದ ಔಷಧಿಗಳು ತಿಪ್ಪೆ ಪಾಲು

Spread the love

ರಾಯಚೂರು: ಬಡ ರೋಗಿಗಳಿಗೆ ತಲುಪಬೇಕಿದ್ದ ಆರೋಗ್ಯ ಇಲಾಖೆಯ ಔಷಧಿಗಳು  ತಿಪ್ಪೆ ಪಾಲಾಗಿರುವ ಘಟನೆ ರಾಯಚೂರು  ನಗರದಲ್ಲಿ ಬೆಳಕಿಗೆ ಬಂದಿದೆ.

ನಗರದ ಕೋಟೆಯ ಕಂದಕದ ಬಳಿ, ಬಸವೇಶ್ವರ ವೃತ್ತದ ಸಮೀಪ ವಿವಿಧ ಬಗೆಯ ಔಷಧಿಗಳ ಡಬ್ಬಿಗಳನ್ನು ಎಸೆಯಲಾಗಿದೆ. ಔಷಧಿಗಳ ನಿರ್ವಹಣೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪತ್ತೆಯಾಗಿರುವ ಔಷಧಿಗಳಲ್ಲಿ ರಕ್ತದೊತ್ತಡ ಮತ್ತು ಮಧುಮೇಹ ಸಮಸ್ಯೆಗಳಿಗೆ ಬಳಸುವ ಮಾತ್ರೆಗಳೂ ಸೇರಿವೆ. ಆರೋಗ್ಯ ಇಲಾಖೆಯಿಂದ ಆರೋಗ್ಯ ಕೇಂದ್ರಗಳಿಗೆ ಸರಬರಾಜು ಮಾಡಲಾಗಿದ್ದ ಈ ಔಷಧಿಗಳು ಬಳಕೆಯಾಗದೆ ಅವಧಿ ಮುಗಿದಿವೆ. ಇದೇ ಸೆಪ್ಟೆಂಬರ್‌ನಲ್ಲಿ ಅವಧಿ ಮುಗಿದ ಔಷಧಿಗಳೂ ಕಸದ ರಾಶಿಯಲ್ಲಿ ಪತ್ತೆಯಾಗಿವೆ.

ಅವಧಿ ಮೀರಿದ ಔಷಧಿಗಳನ್ನು ನಿಯಮಾನುಸಾರ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕಿತ್ತು. ಆದರೆ, ಸಾರ್ವಜನಿಕರು ಹಾಗೂ ಜಾನುವಾರುಗಳು ಓಡಾಡುವ ಪ್ರದೇಶದಲ್ಲಿ ಔಷಧಿಗಳನ್ನು ಎಸೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಆರೋಗ್ಯ ಕೇಂದ್ರಗಳಿಗೆ ಸರಬರಾಜು ಮಾಡಿದ ಔಷಧಿಗಳ ದಾಸ್ತಾನು ಮತ್ತು ನಿರ್ವಹಣೆಯಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ರಾಯಚೂರು ನಗರದಲ್ಲಿ ಈ ರೀತಿಯ ಘಟನೆಗಳು ಈ ಹಿಂದೆಯೂ ಹಲವು ಬಾರಿ ನಡೆದಿವೆ. ಮತ್ತೆ ಇಂತಹ ಘಟನೆ ಮರುಕಳಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಡ ರೋಗಿಗಳಿಗೆ ತಲುಪಬೇಕಾದ ಔಷಧಿಗಳು ಬಳಕೆಯಾಗದೆ ವ್ಯರ್ಥವಾಗುತ್ತಿರುವುದಕ್ಕೆ ಹೊಣೆ ಯಾರು ಎಂಬ ಪ್ರಶ್ನೆಯೂ ಮೂಡಿದೆ.


Spread the love

About Laxminews 24x7

Check Also

ನಮ್ಮದು ಸೌಜನ್ಯದ ಭೇಟಿಯಷ್ಟೇ – ಸಿದ್ದರಾಮಯ್ಯ

Spread the loveಮೈಸೂರು: ರಮೇಶ್ ಜಾರಕಿಹೊಳಿ ಅವರೊಂದಿಗೆ ಭೇಟಿ ಸೌಜನ್ಯದ ಭೇಟಿಯಷ್ಟೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ