ಬೆಳಗಾವಿ: ರಾಜೀವ ಗಾಂಧಿ ಆವಾಸ ಯೋಜನೆಯ ಅನುಷ್ಠಾನ ಹಾಗೂ ಪ್ರಗತಿ ಕುರಿತು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ಪರಿಶೀಲನಾ ಸಭೆ ನಡೆಯಿತು.
ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯೋಜನೆಯ ಪ್ರಸ್ತುತ ಸ್ಥಿತಿಗತಿ ಹಾಗೂ ಈವರೆಗೆ ಕೈಗೊಂಡಿರುವ ಕಾರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.
ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಯೋಜನೆಯ ಪ್ರಗತಿಯ ವಿವರಗಳನ್ನು ಸಭೆಗೆ ತಿಳಿಸಿದರು. ಮಾಹಿತಿ ಪರಿಶೀಲಿಸಿದ ಶಾಸಕ ಆಸೀಫ್ ಸೇಠ್ ಅವರು, ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ., ಆಡಳಿತ ಶಾಖೆಯ ಉಪ ಆಯುಕ್ತ ಉದಯ ಕುಮಾರ ಬಿ.ಟಿ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Laxmi News 24×7