Breaking News

ಕೆಮ್ಮಣ್ಣುಗುಂಡಿ ಬಳಿ ಹುಲಿ ಪ್ರತ್ಯಕ್ಷ – ಪ್ರವಾಸಿಗರಿಗೆ ಅರಣ್ಯ ಇಲಾಖೆ ಎಚ್ಚರಿಕೆ

Spread the love

ಚಿಕ್ಕಮಗಳೂರು: ಕೆಮ್ಮಣ್ಣುಗುಂಡಿ ಬಳಿ ಹುಲಿಯೊಂದು ಕಾಣಿಸಿಕೊಂಡಿದೆ. ಹುಲಿಯ ಓಡಾಟದ ದೃಶ್ಯಗಳು ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಈ ಭಾಗಕ್ಕೆ ತೆರಳುವ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಮ್ಮಣ್ಣುಗುಂಡಿ, ಕಲ್ಲತ್ತಿಗರಿ, ಹೆಬ್ಬೆ ಫಾಲ್ಸ್ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಭಾಗದಲ್ಲಿ ಹುಲಿ ಓಡಾಟ ಕಂಡು ಬಂದಿದೆ. ರಸ್ತೆ ಬದಿಯಲ್ಲೇ ಹುಲಿಯನ್ನು ಕಂಡು ಪ್ರವಾಸಿಗರಲ್ಲಿ ಆತಂಕ ಸೃಷ್ಟಿಯಾಗಿದೆ.

ಹುಲಿಯ ಓಡಾಟದಿಂದ ಸ್ಥಳೀಯರು ಹಾಗೂ ಪ್ರವಾಸಿಗರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನೂ ಈ ಭಾಗದ ಜನರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Spread the loveನವದೆಹಲಿ: ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಶುಕ್ರವಾರ ತಡರಾತ್ರಿ ಸಮಸ್ಯೆ ಕಾಣಿಸಿಕೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ