Breaking News

ರಾಜ್ಯಕ್ಕೆ 2ನೇ ಮಹಿಳಾ ರಾಜ್ಯಪಾಲರ ನೇಮಕ – ಹೊಸ ಉತ್ಸಾಹದೊಂದಿಗೆ ಒಟ್ಟಾಗಿ ಕೆಲಸ ಮಾಡೋಣ: ಸಿಎಂ

Spread the love

ಬೆಂಗಳೂರು: ಕರ್ನಾಟಕ ಎರಡನೇ ಮಹಿಳಾ ರಾಜ್ಯಪಾಲರನ್ನು ಪಡೆದಿದ್ದು ಕರ್ನಾಟಕದ ಪಾಲಿಗೆ ಇಂದು ಮಹತ್ವದ ದಿನವಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ನಡೆದ ನೂತನ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರ ಸ್ವಾಗತ ಹಾಗೂ ನಿಕಟಪೂರ್ವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಈ ಮೊದಲು ಕರ್ನಾಟಕದ ಮೊದಲ ಮಹಿಳಾ ರಾಜ್ಯಪಾಲರಾಗಿದ್ದ ರಮಾದೇವಿಯವರೊಂದಿಗೆ ಕೆಲಸ ಮಾಡಿದ್ದೇವೆ. ಈಗ ಡಾ. ಸುಧಾ ಯಾದವ್ ಅವರೊಂದಿಗೆ ಕೆಲಸ ಮಾಡುವ ಅವಕಾಶ ಒದಗಿದೆ. ಹೊಸ ಉತ್ಸಾಹದೊಂದಿಗೆ ಒಟ್ಟಾಗಿ ಕೆಲಸ ಮಾಡೋಣ. ಜನ್ಮದಿನದಂದೇ ಅವರು ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ವಿಶೇಷ” ಎಂದು ಶುಭ ಕೋರಿದರು.

“ನಿಕಟ ಪೂರ್ವ ರಾಜ್ಯಪಾಲ ಥಾವರ್ ಸಿಂಗ್ ಗೆಹ್ಲೋಟ್ ಅವರೊಂದಿಗೆ ಐದು ವರ್ಷಗಳ ಕಾಲ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಅವರು ನಮ್ಮೊಂದಿಗೆ ಸಹಕರಿಸಿದ್ದಾರೆ” ಎಂದು ಹೇಳಿದರು.

“ಕರ್ನಾಟಕ ತನ್ನ ಶ್ರೀಮಂತ ಸಂಸ್ಕೃತಿಗೆ ಹೆಸರುವಾಸಿಯಾಗಿದ್ದು, ಗೆಹ್ಲೋಟ್ ಅವರ ಅವಧಿಯಲ್ಲಿ ಅವರಿಗೆ ರಾಜ್ಯದ ಉತ್ತಮ ಆಡಳಿತ, ಸಂಸ್ಕೃತಿ, ಪರಂಪರೆ ಹಾಗೂ ರಾಜ್ಯದ ಜನರ ಕುರಿತು ಪರಿಚಯವಾಗಿದೆ. ಇಂದು ಅವರು ಅಧಿಕಾರವನ್ನು ಡಾ. ಸುಧಾ ಯಾದವ್ ಅವರಿಗೆ ಹಸ್ತಾಂತರ ಮಾಡಿದ್ದಾರೆ” ಎಂದರು.

“ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೂತನ ರಾಜ್ಯಪಾಲರ ನೇಮಕದ ಬಗ್ಗೆ ನನಗೆ ದೂರವಾಣಿಯ ಮೂಲಕ ತಿಳಿಸಿದರು. ರಾಜ್ಯಪಾಲರ ನಿರ್ಧಾರಗಳನ್ನು ರಾಜ್ಯ ಸರ್ಕಾರ ಬಹುತೇಕ ಸ್ವೀಕಾರ ಮಾಡಿದೆ ಎಂದು ಅವರಿಗೆ ತಿಳಿಸಿದ್ದೇನೆ” ಎಂದು ಹೇಳಿದರು.

“ನಮ್ಮ ಸಂಸ್ಕೃತಿ, ಪರಂಪರೆಯ ಪ್ರತಿಬಿಂಬವಾಗಿರುವ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮೈಸೂರಿಗೆ ಆಗಮಿಸಬೇಕು” ಎಂದು ಸಿಎಂ ನೂತನ ರಾಜ್ಯಪಾಲರಿಗೆ ಆಹ್ವಾನಿಸಿದರು.

“ಗೆಹ್ಲೋಟ್ ಅವರನ್ನು ಅನೇಕ ವಿಷಯಗಳ ಬಗ್ಗೆ ನಾವು ಸಾಕಷ್ಟು ತೊಂದರೆ ನೀಡಿದ್ದರೂ ಅವರು ಸರ್ಕಾರಕ್ಕೆ ಬೆಂಬಲ ನೀಡಿದ್ದಲ್ಲದೆ, ರಾಜ್ಯದ ಜನರ ಜೀವನ ಸುಧಾರಣೆ ಮಾಡುವ ನಿಟ್ಟಿನಲ್ಲಿ ಮಾರ್ಗದರ್ಶನವನ್ನು ಕೂಡ ಮಾಡಿದ್ದರು. ಕರ್ನಾಟಕ ಆರ್ಥಿಕ, ತಾಂತ್ರಿಕ, ಉತ್ತಮ ಆಡಳಿತ ಸೇರಿದಂತೆ ಎಲ್ಲಾ ವಲಯಗಳಲ್ಲಿಯೂ ದೇಶಕ್ಕೆ ಬಹುದೊಡ್ಡ ಶಕ್ತಿ ಮತ್ತು ಕೊಡುಗೆ ನೀಡುತ್ತಿದೆ” ಎಂದರು.

“ರಾಜ್ಯದ ಅಧಿಕಾರಿ ವರ್ಗವೂ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಆಡಳಿತ ವ್ಯವಸ್ಥೆ ನೀಡುವಲ್ಲಿ ಶ್ರಮಿಸುತ್ತಿದ್ದಾರೆ. ನಾವೆಲ್ಲರೂ ನಿಮ್ಮೊಂದಿಗೆ ಇದ್ದು, ನಿಮ್ಮ ಸಹಕಾರಕ್ಕೆ ಧನ್ಯವಾದಗಳು” ಎಂದು ಹೇಳಿದರು.


Spread the love

About Laxminews 24x7

Check Also

ಬಿಜೆಪಿ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Spread the loveನವದೆಹಲಿ: ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಶುಕ್ರವಾರ ತಡರಾತ್ರಿ ಸಮಸ್ಯೆ ಕಾಣಿಸಿಕೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ