Breaking News

ಪ್ರಲ್ಹಾದ ಜೋಶಿಯವರ ನೇತೃತ್ವದಲ್ಲಿ ಕಬ್ಬು ಬೆಳೆಗಾರ ರೈತರೊಂದಿಗೆ ಸಭೆ

Spread the love

ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ನಿನ್ನೆ ರಾತ್ರಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ ಜೋಶಿಯವರ ನೇತೃತ್ವದಲ್ಲಿ ಹೋರಾಟ ನಿರತ ಕಬ್ಬು ಬೆಳೆಗಾರ ರೈತರೊಂದಿಗೆ ನಡೆದ ಸಭೆಯು ಅತ್ಯಂತ ಫಲಪ್ರದವಾಗಿದೆ.
ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರವು ಸದಾಕಾಲ ರೈತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ರೈತರ ಬೇಡಿಕೆಗಳ ಕುರಿತು ಸಮಿತಿಯ ತಜ್ಞರೊಂದಿಗೆ ಚರ್ಚಿಸಿ ಶೀಘ್ರದಲ್ಲಿಯೇ ಉತ್ತಮ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಲಾಯಿತು.
ಮನವಿಗೆ ಸ್ಪಂದಿಸಿ ಸಹಕರಿಸಿದ ರೈತ ಮುಖಂಡರಾದ ಶ್ರೀ ಶಶಿಕಾಂತ ಗುರೂಜಿ ಹಾಗೂ ಶ್ರೀ ಚುನಪ್ಪ ಪೂಜಾರಿ ಅವರ ನಿಯೋಗಕ್ಕೆ ಹೃತ್ಪೂರ್ವಕ ಧನ್ಯವಾದಗಳು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಜಗದೀಶ ಶೆಟ್ಟರ, ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಸಿ. ಸಿ. ಪಾಟೀಲ್, ಶಾಸಕರಾದ ಶ್ರೀ ಎಂ. ಆರ್. ಪಾಟೀಲ ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಸ್ಟಿಂಗ್ ಆಪರೇಷನ್ ಮಾಡಿದವರನ್ನು ಒದ್ದು ಒಳಗೆ ಹಾಕಬೇಕು: ಸಚಿವ ಎಂ.ಬಿ.ಪಾಟೀಲ್ ಆಕ್ರೋಶ

Spread the loveರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಿರುವ ಸ್ಟಿಂಗ್ ಆಪರೇಷನ್ ವಿವಾದದ ಬಗ್ಗೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ