Breaking News

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್: 19 ಜಿಲ್ಲೆಗಳಲ್ಲಿ ಮದ್ಯ ಮಾರಾಟ ನಿಷೇಧ

Spread the love

ಮದ್ಯ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ 19 ಜಿಲ್ಲೆಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಅಕ್ಟೋಬರ್ 23ರಂದು ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ನಡೆಯಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೂರು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಅಕ್ಟೋಬರ್ 21ರ ಸಂಜೆ 4ರಿಂದ ಅಕ್ಟೋಬರ್ 23ರ ಮಧ್ಯರಾತ್ರಿವರೆಗೆ 3 ದಿನಗಳ ಕಾಲ ಮದ್ಯ ಮಾರಾಟ, ಸಾಗಣೆ ಹಾಗೂ ಸೇವನೆಯನ್ನು ನಿಷೇಧಿಸಲಾಗಿದೆ. ಬೆಂಗಳೂರು ಸೇರಿದಂತೆ ಒಟ್ಟು 19 ಜಿಲ್ಲೆಗಳಲ್ಲಿ ಈ ನಿಯಮ ಅನ್ವಯವಾಗಲಿದ್ದು, ನಿಯಮ ಉಲ್ಲಂಘಿಸದಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಆದೇಶ ಹೊರಡಿಸಿದ್ದಾರೆ.

ಈ ಜಿಲ್ಲೆಗಳಲ್ಲಿ ಮದ್ಯ ಮಾರಾಟ ನಿಷೇಧ:
ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ
ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ
ಬೆಂಗಳೂರು ಶಿಕ್ಷಕರ ಕ್ಷೇತ್ರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ (ರಾಮನಗರ)


Spread the love

About Laxminews 24x7

Check Also

ಕಬ್ಬು ಬೆಳೆಗಾರರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್: ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್

Spread the loveಕೆಲ ದಿನಗಳಿಂದ ತೀವ್ರ ಸಂಚಲನ ಸೃಷ್ಟಿಸಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್ ನೀಡಲಾಗಿದೆ. ತಮ್ಮ ಬೇಡಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ