Breaking News

ಬೀದಿನಾಯಿಯನ್ನು ಮರಕ್ಕೆ ನೇತುಹಾಕಿ ಹೊಡೆದು ಕೊಂದ ದುಷ್ಕರ್ಮಿಗಳು: ವಿಡಿಯೋ ವೈರಲ್

Spread the love

ಇದೆಂತಹ ವಿಲಕ್ಷಣ ಕೃತ್ಯ. ಬೀದಿ ನಾಯಿಯನ್ನು ಮರಕ್ಕೆ ನೇತುಹಾಕಿ ಕ್ರೂರವಾಗಿ ಹಲ್ಲೆ ಮಾಡಿ ಕೊಂದಿರುವ ಘಟನೆ ನಡೆದಿದೆ.

ಈ ಪ್ರಕರಣ ಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಶ್ವಾನ ಪ್ರಿಯೆ ನಿಶ್ಚಿಂತ ನರೇನ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪುನೀತ್, ಮುರಳಿ ಹಾಗೂ ಮುನಿಯಪ್ಪ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನ ಗುಂಜೂರಿನ ಗ್ರೀನ್ ವುಡ್ ಹೈಸ್ಕೂಲ್ ಬಳಿ ಇರುತ್ತಿದ್ದ ಬೀದಿನಾಯಿಯನ್ನು ಏರಿಯಾ ಸುತ್ತಮುತ್ತಲಿನ ಮುನಿಯಪ್ಪ, ಮುರಳಿ ಹಾಗೂ ಪುನೀತ್ ಎಂಬುವರು ಮರಕೆ ಕಟ್ಟಿಹಾಕಿ ಕ್ರೂರವಾಗಿ ಹೊಡೆದು ಹೊಡೆದು ಸಾಯಿಸಿದ್ದಾರೆ. ಈ ಘಟನೆ ಶಾಲೆಯ ಎದುರು ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವರ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸಿಸಿಟಿವಿ ಆಧರಿಸಿ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೀದಿನಾಯಿಯ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಚಾರಣೆ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ಧಾರೆ.


Spread the love

About Laxminews 24x7

Check Also

ಪೊಲೀಸರು ಅವ್ರ ಡ್ಯೂಟಿ ಮಾಡಿದ್ದಾರೆ, ಅದರಲ್ಲಿ ತಪ್ಪೇನಿದೆ: ಡಿಸಿಎಂ ರಿಯಾಕ್ಷನ್‌

Spread the loveಬೆಂಗಳೂರು: ದಸರಾದಲ್ಲಿ ನಂದಿಧ್ವಜ ಪೂಜೆಗೆ ಮುಖ್ಯಮಂತ್ರಿಗಳೊಂದಿಗೆ  ತೆರಳುತ್ತಿದ್ದ ಸಚಿವರನ್ನು ಎಸ್‌ಪಿ ತಡೆದಿರುವ ಘಟನೆಗೆ ಸಂಬಧಿಸಿದಂತೆ ಉಪಮುಖ್ಯಮಂತ್ರಿ ಜಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ