Breaking News

ಅ.31ಕ್ಕೆ ಮಂಡ್ಯಕ್ಕೆ ಸಿಎಂ ಡಿಕೆಶಿ ಭೇಟಿ – ವಿವಿಧ ಅಭಿವೃದ್ಧಿ ಕಾಮಗಾರಿ ಚಾಲನೆಗೆ ಭರ್ಜರಿ ಸಿದ್ಧತೆ

Spread the love

ಮಂಡ್ಯ: ನಗರಕ್ಕೆ ಅಕ್ಟೋಬರ್ 31ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ಅಧಿಕೃತವಾಗಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಭರ್ಜರಿ ಸಿದ್ಧತೆಗಳು ಆರಂಭಗೊಂಡಿವೆ.

ಕಾರ್ಯಕ್ರಮದ ಯಶಸ್ಸಿಗಾಗಿ ಮಂಡ್ಯ  ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಗೌಡ ಗಣಿಗ  ಅವರು ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ತಲೆ ಎತ್ತಲಿರುವ ಬೃಹತ್ ವೇದಿಕೆ ನಿರ್ಮಾಣ ಕಾಮಗಾರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಿದ್ಧತಾ ಕಾರ್ಯಗಳಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ.

ಮಂಡ್ಯ ನಗರದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ, ಸಾರ್ವಜನಿಕ ಸೌಲಭ್ಯಗಳ ವಿಸ್ತರಣೆ ಮತ್ತು ಜನರ ದೀರ್ಘಕಾಲದ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದೆ. ಮುಖ್ಯಮಂತ್ರಿಗಳ ಕೈಯಿಂದ ನಡೆಯಲಿರುವ ಈ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯು ಮಂಡ್ಯ ನಗರದ ಪ್ರಗತಿಗೆ ಹೊಸ ಚೈತನ್ಯ ನೀಡಲಿದೆ ಎಂದು ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ನಿರೀಕ್ಷಿಸಿದ್ದಾರೆ.

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಸಮನ್ವಯತೆಯಿಂದ ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ.


Spread the love

About Laxminews 24x7

Check Also

ಪೊಲೀಸರು ಅವ್ರ ಡ್ಯೂಟಿ ಮಾಡಿದ್ದಾರೆ, ಅದರಲ್ಲಿ ತಪ್ಪೇನಿದೆ: ಡಿಸಿಎಂ ರಿಯಾಕ್ಷನ್‌

Spread the loveಬೆಂಗಳೂರು: ದಸರಾದಲ್ಲಿ ನಂದಿಧ್ವಜ ಪೂಜೆಗೆ ಮುಖ್ಯಮಂತ್ರಿಗಳೊಂದಿಗೆ  ತೆರಳುತ್ತಿದ್ದ ಸಚಿವರನ್ನು ಎಸ್‌ಪಿ ತಡೆದಿರುವ ಘಟನೆಗೆ ಸಂಬಧಿಸಿದಂತೆ ಉಪಮುಖ್ಯಮಂತ್ರಿ ಜಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ