Breaking News

ಲಾರಿಗೆ KSRTC ಬಸ್ ಡಿಕ್ಕಿ – ಚಾಲಕ, ಪ್ರಯಾಣಿಕ ದುರ್ಮರಣ

Spread the love

ಚಿತ್ರದುರ್ಗ: ಲಾರಿಗೆ ಕೆಎಸ್‌ಆರ್‌ಟಿಸಿ ಬಸ್  ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ  ಹಾಗೂ ಪ್ರಯಾಣಿಕ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ  ತಾಲೂಕಿನ ಮಲ್ಲಾಪುರ \ಗ್ರಾಮದ ಬಳಿ ನಡೆದಿದೆ.

ಭೀಕರ ಅಪಘಾತದಲ್ಲಿ ಬಸ್ ಚಾಲಕ ಬಾಪು ಪಾಟೀಲ್ (36), ಪ್ರಯಾಣಿಕ ಗಗನ್ (14) ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಅಪಘಾತ ನಡೆದಿದ್ದು, ಘಟನೆಯಲ್ಲಿ ಬಸ್‌ನಲ್ಲಿದ್ದ 15ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೋರ್ವ ಗಾಯಾಳು ಪ್ರಯಾಣಿಕ ರಾಜು ನಾಯ್ಕ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್ನಲ್ಲಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಪೊಲೀಸರು ಅವ್ರ ಡ್ಯೂಟಿ ಮಾಡಿದ್ದಾರೆ, ಅದರಲ್ಲಿ ತಪ್ಪೇನಿದೆ: ಡಿಸಿಎಂ ರಿಯಾಕ್ಷನ್‌

Spread the loveಬೆಂಗಳೂರು: ದಸರಾದಲ್ಲಿ ನಂದಿಧ್ವಜ ಪೂಜೆಗೆ ಮುಖ್ಯಮಂತ್ರಿಗಳೊಂದಿಗೆ  ತೆರಳುತ್ತಿದ್ದ ಸಚಿವರನ್ನು ಎಸ್‌ಪಿ ತಡೆದಿರುವ ಘಟನೆಗೆ ಸಂಬಧಿಸಿದಂತೆ ಉಪಮುಖ್ಯಮಂತ್ರಿ ಜಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ