ಚಿಕ್ಕಬಳ್ಳಾಪುರ: ಮೈಸೂರು ದಸರಾ ಕಾರ್ಯಕ್ರಮದ ವೇಳೆ ದಲಿತ ಸಮುದಾಯದ ಸಚಿವರನ್ನ ತಡೆದ ವಿವಾದಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಎಂಟ್ರಿಯಾಗಿದ್ದಾರೆ.
ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, ದಲಿತ ಸಮುದಾಯದ ಸಚಿವರ ಪರವಾಗಿ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು ಬೆಂಬಲ ವ್ಯಕ್ತಪಡಿಸಿದ್ದಾರೆ.
ಮೈಸೂರು ದಸರಾ ಸಂದರ್ಭದಲ್ಲಿ ನಡೆದ ಈ ಘಟನೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ದಲಿತ ಸಮುದಾಯದ ಸಚಿವರ ವಿಚಾರವಾಗಿ ಶಾಸಕ ಪ್ರದೀಪ್ ಈಶ್ವರ್ ಧ್ವನಿ ಎತ್ತಿದ್ದು, ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಘಟನೆಯ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
ದಸರಾ ಎಂಬುದು ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಸಾಮರಸ್ಯದ ಪ್ರತೀಕ. ಇಂತಹ ಮಹತ್ವದ ಕಾರ್ಯಕ್ರಮದ ವೇಳೆ ಸಚಿವರನ್ನ ತಡೆದಿದ್ದಾರೆ ಎನ್ನಲಾದ ಘಟನೆ ವಿವಾದಕ್ಕೆ ಕಾರಣವಾಗಿದೆ. ಇದೀಗ ರಾಜಕೀಯ ನಾಯಕರ ಪ್ರತಿಕ್ರಿಯೆಗಳಿಗೂ ವೇದಿಕೆಯಾಗಿದೆ. ಮೈಸೂರು ದಸರಾ ವೇಳೆ ನಡೆದಿರುವುದಾಗಿ ಹೇಳಲಾಗುತ್ತಿರುವ ಘಟನೆಗೆ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿರುವುದು ರಾಜಕೀಯ ಚರ್ಚೆಗೆ ಹೊಸ ತಿರುವು ನೀಡಿದೆ.
ಎಕ್ಸ್ನಲ್ಲಿ ಏನಿದೆ?
ದಲಿತ ಸಮುದಾಯದ ಹಿರಿಯ ಸಚಿವರಾದ ನರೇಂದ್ರಸ್ವಾಮಿ ಅವರು, ಶಿವರಾಜ್ ತಂಗಡಗಿ ಅವರು ಮತ್ತು ಬಸವಂತಪ್ಪ ಅವರನ್ನ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬ ನಿನ್ನೆ ನಡೆದ ದಸರಾ ಕಾರ್ಯಕ್ರಮದಲ್ಲಿ ತಡೆದಿದ್ದಾರೆ. ಇದು ಖಂಡಿತವಾಗಿಯೂ ಬೇಸರದ ಸಂಗತಿ. ಈ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ರಾಜ್ಯ ಸರ್ಕಾರ ಹಾಗೂ ನಮ್ಮ ಮುಖ್ಯಮಂತ್ರಿಗಳಲ್ಲಿ ವಿನಂತಿಸುತ್ತೇನೆ, ದಯವಿಟ್ಟು ಆ ಪೊಲೀಸ್ ಅಧಿಕಾರಿಯ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಿ ಎಂದು ವಿನಂತಿಸುತ್ತೇನೆ.
ದಲಿತ ಸಮುದಾಯವು ನಮ್ಮ ನಾಡಿಗೆ ಮತ್ತು ದೇಶಕ್ಕೆ ನೀಡಿರುವ ಕೊಡುಗೆ ಅದ್ಭುತವಾದದ್ದು. ನಾನೊಬ್ಬ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಕ್ತನಾಗಿ, ಅನುಯಾಯಿಯಾಗಿ, ದಲಿತರ ಪರವಾಗಿ ಗಟ್ಟಿಯಾಗಿ ಧ್ವನಿ ಎತ್ತುತ್ತಿದ್ದೇನೆ. ದಯವಿಟ್ಟು ನಮ್ಮ ಸರ್ಕಾರವನ್ನು ಮತ್ತೊಮ್ಮೆ ವಿನಂತಿಸುತ್ತೇನೆ, ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಿ ಅಂತಾ ಒತ್ತಾಯಿಸಿದ್ದಾರೆ.
Laxmi News 24×7