Breaking News

ಕಾಕತಿ ರಾಣಿ ಚೆನ್ನಮ್ಮ ಕೋಟೆ ಅಭಿವೃದ್ಧಿಗೆ ಪರ್ಯಾಯ ಜಾಗದ ಚಿಂತನೆ: ಸಚಿವ ಸತೀಶ ಜಾರಕಿಹೊಳಿ

Spread the love

ಕಾಕತಿ: ಕಿತ್ತೂರು ರಾಣಿ ಚೆನ್ನಮ್ಮನ ಇತಿಹಾಸ ಸಾರುವ ಕಾಕತಿಯ ಕೋಟೆ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗಿದೆ. ಪರ್ಯಾಯ ಜಾಗ ಲಭ್ಯವಾದರೆ ಕೋಟೆ ಹಾಗೂ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ತಾಲೂಕಿನ ಕಾಕತಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ 202ನೇ ಕಿತ್ತೂರು ರಾಣಿ ಚೆನ್ನಮ್ಮ ವಿಜಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿದ ಸಚಿವರು, ಯಮಕನಮರಡಿ ಕ್ಷೇತ್ರದಲ್ಲಿ 250 ಶಾಲಾ ಕೊಠಡಿಗಳ ನಿರ್ಮಾಣದ ಕಾರ್ಯ ಇತಿಹಾಸ ಸೃಷ್ಟಿಸುವಂತಿದೆ. ಮುಂದಿನ ದಿನಗಳಲ್ಲಿ 300 ಶಾಲಾ ಕೊಠಡಿಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಕುಡಿಯುವ ನೀರು ಹಾಗೂ ಹೈಟೆಕ್ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿದ್ದಾರೆ. ಅವರಿಗೆ ಸೂಕ್ತ ಪ್ರೋತ್ಸಾಹ ಹಾಗೂ ಗುಣಮಟ್ಟದ ಶಿಕ್ಷಣ ನೀಡಿದರೆ ಅವರು ಸಮಾಜದ ಆಸ್ತಿಯಾಗುತ್ತಾರೆ. ರಾಣಿ ಚೆನ್ನಮ್ಮನಂತೆ ಇತಿಹಾಸ ನಿರ್ಮಿಸುವ ಸಾಮರ್ಥ್ಯವನ್ನು ಮಹಿಳೆಯರು ಹೊಂದಿದ್ದಾರೆ ಎಂದು ಹೇಳಿದರು.

ಕೋಟೆ ಅಭಿವೃದ್ಧಿಗೆ ಹೋರಾಟ ಅಗತ್ಯ: ಶಿವಸಿದ್ಧ ಸೋಮೇಶ್ವರ ಸ್ವಾಮೀಜಿ

ಭೂತರಾಮನಹಟ್ಟಿ ಶ್ರೀಕ್ಷೇತ್ರ ಮುಕ್ತಿ ಮಠದ ಪರಮಪೂಜ್ಯ ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ, ಕಾಕತಿಯ ರಾಣಿ ಚೆನ್ನಮ್ಮನ ಕೋಟೆಯನ್ನು ಅರಣ್ಯ ಇಲಾಖೆಯ ವ್ಯಾಪ್ತಿಯಿಂದ ಬಿಡುಗಡೆಗೊಳಿಸಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಚಿವರಿಗೆ ಮನವಿ ಸಲ್ಲಿಸಬೇಕು. ಈ ಭಾಗದ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸುವ ಅಗತ್ಯವಿದೆ ಎಂದು ಕರೆ ನೀಡಿದರು.

ಸುತ್ತಮುತ್ತಲಿನ ಹತ್ತಾರು ಗ್ರಾಮಗಳಲ್ಲಿ ರಾಣಿ ಚೆನ್ನಮ್ಮನ ಇತಿಹಾಸದ ನೆನಪುಗಳಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ. ನಮಗೆ ಉತ್ತಮ ಜನಪ್ರತಿನಿಧಿಗಳು ದೊರೆತಿದ್ದು, ಕೋಟೆಯ ಅಭಿವೃದ್ಧಿಗೆ ಎದುರಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಎಲ್ಲರೂ ಒಟ್ಟಾಗಿ ಪ್ರಯತ್ನಿಸಬೇಕು ಎಂದು ಹೇಳಿದರು.

ಹೆಣ್ಣುಮಕ್ಕಳಿಗೆ ಶಿಕ್ಷಣ, ಪ್ರೋತ್ಸಾಹ ನೀಡಿ

ಕಾರ್ಯಕ್ರಮದಲ್ಲಿ ಮಾತನಾಡಿದ ರಜನಿ ಜಿರಗ್ಯಾಳ ಅವರು, ರಾಣಿ ಚೆನ್ನಮ್ಮ ತಂದೆಯ ಪ್ರೇರಣೆಯಿಂದ ಸ್ವಾತಂತ್ರ್ಯ ಹೋರಾಟಕ್ಕೆ ಮುಂದಾದರು. ಇಂದಿನ ಕಾಲದಲ್ಲಿಯೂ ಹೆಣ್ಣುಮಕ್ಕಳಿಗೆ ಸಮಾನ ಅವಕಾಶ, ಗುಣಮಟ್ಟದ ಶಿಕ್ಷಣ ಹಾಗೂ ಪ್ರೋತ್ಸಾಹ ನೀಡುವುದು ಅತ್ಯಂತ ಅಗತ್ಯವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಮ್ಮ ಮಗಳಿಗೆ ಶಿಕ್ಷಣ ನೀಡಿ, ಜನಸೇವೆಯ ಕ್ಷೇತ್ರದಲ್ಲಿ ಮುನ್ನಡೆಯಲು ಪ್ರೋತ್ಸಾಹಿಸಿರುವುದು ಇತರ ಪೋಷಕರಿಗೂ ಮಾದರಿಯಾಗಿದೆ. ಪ್ರತಿಯೊಬ್ಬರೂ ತಮ್ಮ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ, ಉನ್ನತ ಸ್ಥಾನಕ್ಕೇರಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ಶಾಸಕ ಆಸಿಫ್ ಸೇಠ್ (ರಾಜು) ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು.

ಗಣ್ಯರ ಉಪಸ್ಥಿತಿ

ಕಾರ್ಯಕ್ರಮದಲ್ಲಿ ಭೂತರಾಮನಹಟ್ಟಿಯ ತಪೋರತ್ನ ಶಿವಸಿದ್ಧ ಮಹಾಸ್ವಾಮಿಗಳು, ಕಾಕತಿಯ ಶಿವಪೂಜಿಮಠದ ಶಿವಸಿದ್ಧ ರಾಚಯ್ಯ ಸ್ವಾಮೀಜಿ ಹಾಗೂ ಕಾಕತಿಯ ಉದಯ ಹಿರೇಮಠದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಕಾರ್ಯನಿರ್ವಾಹಕ ಅಧಿಕಾರಿ ಶ್ರವಣಕುಮಾರ ನಾಯಕ, ಆಯುಕ್ತ ಪ್ರಕಾಶ ನಿಕ್ಕಮ್, ವಿನಯ ನಾವಲಗಟ್ಟಿ, ಸಿದ್ದು ಸುಣಗಾರ, ಹನುಮಂತ ಶಿರಹಟ್ಟಿ, ರಜನಿ ಜಿರಗ್ಯಾಳ, ಲಕ್ಷ್ಮೀ ಪೂಜಾರಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಯಲ್ಲಪ್ಪ ಕೋಳೆಕರ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜಂಬೂ ಸವಾರಿಗೆ ಪುಷ್ಪಾರ್ಚನೆ – ಪ್ರೋಟೋಕಾಲ್‌ನಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ: ಸಚಿವ ಯತೀಂದ್ರ

Spread the loveಮೈಸೂರು: ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅವರು ಮೊದಲ ಬಾರಿಗೆ ಜಂಜೂಸವಾರಿಗೆ ಪುಷ್ಪಾರ್ಚನೆ ಮಾಡಿದ್ದು, ದಸರಾ  ಕೂಡ ಯಶಸ್ವಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ