Breaking News

ಕಳ್ಳರು ಎಂದು ಇಬ್ಬರ ಮೇಲೆ ಗಂಭೀರ ಹಲ್ಲೆ – 10 ಜನರ ವಿರುದ್ಧ FIR

Spread the love

ಬೆಂಗಳೂರು: ಕಳ್ಳರು ಎಂದು ಇಬ್ಬರ ಮೇಲೆ ಗಂಭೀರ ಹಲ್ಲೆ ಮಾಡಿದ್ದ 10 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಾಹಿದ್ (19) ಹಲ್ಲೆಗೊಳಗಾದ ಯುವಕ.

ವಾಹನಕ್ಕೆ ಅಡ್ಡ ಬಂದ ಎಂದು ಶಾಹೀದ್ ಹಾಗೂ ಫರ್ದೀನ್ ಪಾಷಾ ಎಂಬ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ಇದೇ ವೇಳೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಜಗಳವಾಡುತ್ತಿದ್ದ ಇಬ್ಬರನ್ನು ಕಳ್ಳರು ಎಂದು ಬಿಂಬಿಸಿದ್ದ. ಕೂಡಲೇ ಅಲ್ಲಿದ್ದ ಸ್ಥಳೀಯರು ಇಬ್ಬರನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ.

ಶಾಹೀದ್ ಮೇಲೆ ಗಂಭೀರ ಹಲ್ಲೆ ನಡೆಸಿ, ಸ್ಥಳೀಯರು ಆತನ ಮೊಬೈಲ್ ಅನ್ನು ಕೂಡ ಒಡೆದು ಹಾಕಿದ್ದಾರೆ. ಸದ್ಯ ಈ ಸಂಬಂಧ ಶಾಹೀದ್ ದೂರು ದಾಖಲಿಸಿದ್ದು, ಆರೋಪಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜಂಬೂ ಸವಾರಿಗೆ ಪುಷ್ಪಾರ್ಚನೆ – ಪ್ರೋಟೋಕಾಲ್‌ನಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ: ಸಚಿವ ಯತೀಂದ್ರ

Spread the loveಮೈಸೂರು: ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅವರು ಮೊದಲ ಬಾರಿಗೆ ಜಂಜೂಸವಾರಿಗೆ ಪುಷ್ಪಾರ್ಚನೆ ಮಾಡಿದ್ದು, ದಸರಾ  ಕೂಡ ಯಶಸ್ವಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ